2 ತಿಮೊಥೆಯನಿಗೆ 1:9 - ಪರಿಶುದ್ದ ಬೈಬಲ್9 ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ದೆವಾನ್ ಅಮ್ಕಾ ಬಚಾವ್ ಕರುನ್ ಅಪ್ನಾಚಿ ಸ್ವತಾಚಿ ಲೊಕಾ ಹೊವ್‍ಸಾಟ್ನಿ ಬಲ್ವುಲ್ಯಾನಾಯ್. ಅಮಿ ಕರಲ್ಲ್ಯಾ ಬರ್‍ಯಾ ಕಾಮಾಸಾಟ್ನಿ ನ್ಹಯ್, ಅಪ್ನಾಚ್ಯಾ ಸ್ವತಾಚ್ಯಾ ಉದ್ದೆಶಾನ್ ಅನಿ ಕುರ್ಪೆನ್ ತೆನಿ ಹೆ ಸಗ್ಳೆ ಕರ್‍ಲ್ಯಾನ್. ಎಳ್ ಮನ್ತಲೆ ಚಾಲು ಹೊವ್ಚ್ಯಾ ಅದ್ದಿಚ್ ಕ್ರಿಸ್ತ್ ಜೆಜುಚ್ಯಾ ವೈನಾ ತೆನಿ ಹಿ ಕುರ್ಪಾ ಅಮ್ಕಾ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |
ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.
ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.