2 ತಿಮೊಥೆಯನಿಗೆ 2:13 - ಪರಿಶುದ್ದ ಬೈಬಲ್13 ನಾವು ನಂಬಿಗಸ್ತರಾಗಿಲ್ಲದಿದ್ದರೂ, ಆತನು ಇನ್ನೂ ನಂಬಿಗಸ್ತನಾಗಿರುವನು; ಏಕೆಂದರೆ ಆತನು ತನ್ನ ಸ್ವಭಾವಕ್ಕೆ ವಿರುದ್ಧನಾಗಲಾರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ತನ್ನ ಸ್ವಭಾವಕ್ಕೆ ವಿರುದ್ಧವಾಗಿ ಏನೂ ಮಾಡಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾವು ಅಪನಂಬಿಗಸ್ತರಾಗಿದ್ದರೂ ಅವರು ನಂಬಿಗಸ್ತರಾಗಿಯೇ ಉಳಿದಿರುವರು. ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅಮಿ ಎಕ್ ಎಳಾರ್ ಗೊಸ್ಟಿಕ್ ಚುಕ್ಲ್ಯಾರ್‍ಬಿ, ತೊ ಗೊಸ್ಟಿಕ್ ವಿಶ್ವಾಸಾನ್ ರ್‍ಹಾತಾ. ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಚ್ಯಾಚ್ ವಿಶಯಾತ್ ವಿರೊದ್ ಹೊಯ್ನಾ”. ಅಧ್ಯಾಯವನ್ನು ನೋಡಿ |
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.