2 ತಿಮೊಥೆಯನಿಗೆ 2:14 - ಪರಿಶುದ್ದ ಬೈಬಲ್14 ಜನರಿಗೆ ಈ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂ ಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತುಜ್ಯಾ ಲೊಕಾಕ್ನಿ ಹ್ಯಾ ಗೊಸ್ಟಿಯಾ ಪರ್ತುನ್ ಪರ್ತುನ್ ಯಾದ್ ಕರುನ್ಗೆತ್ ರ್‍ಹಾ. ಗೊಸ್ಟಿಯಾಕ್ನಿ ಲಾಗುನ್ ತೆನಿ ಕಸ್ಲೊಬಿ ವಾದ್ ಧರುನ್ ಘೆವ್ನ್ ರ್‍ಹಾವ್ಚೆ ನ್ಹಯ್ ಮನುನ್ ದೆವಾಚ್ಯಾ ನಾವಾನ್ ತೆಂಕಾ ಬುದ್ ಸಾಂಗ್, ಅಸ್ಲ್ಯಾ ಬುರ್ಶ್ಯಾ ಗೊಸ್ಟಿಯಾ ಆಯಿಕ್ತಲ್ಯಾಂಚ್ಯಾ ಫಾಯ್ದಾಕ್ ಪಡ್ತಲೆ ಸೊಡುನ್ ತೆಂಚ್ಯಾ ನಾಸಾಕ್ ಕಾರನ್ ಹೊತ್ಯಾತ್. ಅಧ್ಯಾಯವನ್ನು ನೋಡಿ |
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.