Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:22 - ಪರಿಶುದ್ದ ಬೈಬಲ್‌

22 ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀನು ಯೌವನದ ಇಚ್ಫೆಗಳಿಗೆ ದೂರವಾಗಿರು; ನೀತಿ ವಿಶ್ವಾಸ ಪ್ರೀತಿ ಮತ್ತು ಸಮಾಧಾನವನ್ನು ಸಂಪಾದಿಸುವದಕ್ಕೆ ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ಪ್ರಯಾಸಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತುಜ್ಯಾ ದಾಂಡ್ಗ್ಯಾಪಾನಾತ್ ತುಕಾ ಯೆತಲ್ಯಾ ಆಶಾನಿತ್ನಾ ತಿಯಾ ಧುರ್ ಕರ್ ಅನಿ ಪವಿತ್ರ್ ಮನಾನ್ ಧನಿಯಾಕ್ ಬಲ್ವುತಲ್ಯಾಂಚ್ಯಾ ವಾಂಗ್ಡಾ ನಿತಿನ್ ಚಲುಸಾಟ್ನಿ, ವಿಶ್ವಾಸಾನ್, ಪ್ರೆಮಾನ್ ಅನಿ ಸಮಾದಾನಾಸಾಟ್ನಿ ಖಟ್ಪಟ್ ಕರ್ ಅನಿ ಧನಿಯಾಚಿ ಮಜತ್ ಮಾಗ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:22
28 ತಿಳಿವುಗಳ ಹೋಲಿಕೆ  

ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.


ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.


ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.


ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.


ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ನೀನು ಯೌವನಸ್ಥನಾಗಿರುವುದರಿಂದ ನಿನ್ನನ್ನು ಪ್ರಮುಖನಲ್ಲವೆಂದು ಪರಿಗಣಿಸಿ ಅಸಡ್ಡೆಮಾಡಲು ಯಾರಿಗೂ ಅವಕಾಶಕೊಡದಿರು. ವಿಶ್ವಾಸಿಗಳು ಹೇಗೆ ಜೀವಿಸಬೇಕೆಂಬುದಕ್ಕೆ ನೀನೇ ಅವರಿಗೆ ಮಾದರಿಯಾಗಿರು. ನಡೆನುಡಿಗಳಲ್ಲಿ, ಪ್ರೀತಿಯಲ್ಲಿ, ನಂಬಿಕೆಯಲ್ಲಿ ಮತ್ತು ಪರಿಶುದ್ಧ ಜೀವನದಲ್ಲಿ ನೀನೇ ಅವರಿಗೆ ಮಾದರಿಯಾಗಿರು.


ಆದ್ದರಿಂದ, ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಗಳ ಪೂಜೆಯ ಬಗ್ಗೆ ಯೋಚಿಸಲೂಬೇಡಿ.


ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.


ನನ್ನ ಪ್ರಿಯ ಸ್ನೇಹಿತನೇ, ಕೆಟ್ಟದ್ದನ್ನು ಅನುಸರಿಸಬೇಡ; ಒಳ್ಳೆಯದನ್ನೇ ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ. ಆದರೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಎಂದೂ ತಿಳಿಯದವನಾಗಿದ್ದಾನೆ.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.


ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.


ಪ್ರೀತಿಯೇ ನಿಮ್ಮ ಗುರಿಯಾಗಿರಲಿ. ಅಲ್ಲದೆ ಪವಿತ್ರಾತ್ಮನ ವರಗಳನ್ನು ಹೊಂದಿಕೊಳ್ಳಲು ವಿಶೇಷವಾಗಿ ಪ್ರವಾದಿಸುವ ವರವನ್ನು ಬಹಳವಾಗಿ ಅಪೇಕ್ಷಿಸಬೇಕು.


ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.


ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.


ಈಗ ಅವನು ದಮಸ್ಕಕ್ಕೂ ಬಂದಿದ್ದಾನೆ. ನಿನ್ನಲ್ಲಿ ನಂಬಿಕೆ ಇಡುವ ಜನರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಮಹಾಯಾಜಕರು ಅವನಿಗೆ ಕೊಟ್ಟಿದ್ದಾರೆ” ಎಂದು ಹೇಳಿದನು.


ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆ ಆ ಸಾಲದ ಬಂಧನದಿಂದ ತಪ್ಪಿಸಿಕೊ. ಬಲೆಯಿಂದ ತಪ್ಪಿಸಿಕೊಂಡು ಹಾರುವ ಪಕ್ಷಿಯಂತೆ ನಿನ್ನನ್ನು ಬಿಡುಗಡೆ ಮಾಡಿಕೋ.


ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.


ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.


ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


ಅವನು ಒಬ್ಬ ಕೆಟ್ಟ ಹೆಂಗಸಿನ ಬೀದಿಯಲ್ಲಿ ಆಕೆಯ ಮನೆಯ ಕಡೆಗೆ ಹೋಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು