2 ತಿಮೊಥೆಯನಿಗೆ 2:24 - ಪರಿಶುದ್ದ ಬೈಬಲ್24 ಪ್ರಭುವಿನ ಸೇವಕನು ವಾಗ್ವಾದ ಮಾಡಲೇಬಾರದು. ಅವನು ಪ್ರತಿಯೊಬ್ಬರಿಗೂ ದಯೆತೋರಬೇಕು; ಒಳ್ಳೆಯ ಉಪದೇಶಕನಾಗಿರಬೇಕು; ತಾಳ್ಮೆಯಿಂದಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪ್ರಭುವಿನ ಶರಣನಿಗೆ ಜಗಳ ಸಲ್ಲದು. ಆತನು ಎಲ್ಲರೊಡನೆ ಸೌಹಾರ್ದದಿಂದ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಕರ್ತನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ಕೇಡನ್ನು ಸಹಿಸಿಕೊಳ್ಳುವವನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕರ್ತ ಯೇಸುವಿನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ದಯೆಯುಳ್ಳವನೂ ಬೋಧಿಸುವುದರಲ್ಲಿ ಪ್ರವೀಣನೂ ಸಹನೆಯುಳ್ಳವನೂ ಆಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಧನಿಯಾಚೊ ಸೆವಕ್ ಹೊಲ್ಲೊ ತಿಯಾ ಝಗ್ಡೆ ಕರುಚೆ ನ್ಹಯ್, ತಿಯಾ ಸಗ್ಳ್ಯಾಂಚ್ಯಾ ವಾಂಗ್ಡಾ ಸೊಸುನ್ ಘೆವ್ನ್ ಚಲುಚೆ, ಎಕ್ ಬರೊ ಅನಿ ಶಾಂತ್‍ಮನಾಚೊ ಗುರು ಹೊವ್ಚೆ, ಅಧ್ಯಾಯವನ್ನು ನೋಡಿ |
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.
ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದ್ದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ.
ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.