ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.
ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.
ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.
ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.
ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.
ನೀವು ಕೆಡುಕರಾಗಬಾರದು ಅಂದರೆ ಕೊಲೆಗಾರರಾಗಬಾರದು, ಕಳ್ಳರಾಗಬಾರದು ಮತ್ತು ಇತರರಿಗೆ ತೊಂದರೆ ಕೊಡಬಾರದು. ಇಂಥವುಗಳನ್ನು ಮಾಡುವವನು ಸಂಕಟಕ್ಕೆ ಒಳಗಾಗುವನು. ನಿಮ್ಮಲ್ಲಿ ಯಾರೂ ಆ ರೀತಿಯ ಸಂಕಟಕ್ಕೆ ಒಳಗಾಗಬಾರದು.
ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.
ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.
ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ.
ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.
ಬೇರೆ ಕೆಲವರು ತಮ್ಮ ಸ್ವಾರ್ಥದ ದೆಸೆಯಿಂದ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅವರ ಸುವಾರ್ತಾಸೇವೆಯ ಉದ್ದೇಶವೇ ತಪ್ಪಾಗಿದೆ. ಸೆರೆಯಲ್ಲಿರುವ ನನಗೆ ತೊಂದರೆ ಮಾಡಬೇಕೆಂಬುದೇ ಅವರ ಅಪೇಕ್ಷೆ.
ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.