2 ತಿಮೊಥೆಯನಿಗೆ 3:1 - ಪರಿಶುದ್ದ ಬೈಬಲ್1 ನೆನಪಿನಲ್ಲಿಡಿರಿ! ಕಡೇ ದಿನಗಳಲ್ಲಿ ಅನೇಕ ತೊಂದರೆಗಳು ಬರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಂತಿಮ ದಿನಗಳು ಕಷ್ಟಕರವಾದ ಕಾಲವಾಗಿರುತ್ತದೆಂಬುದನ್ನು ಜ್ಞಾಪಕದಲ್ಲಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದರೆ ಕಡೇ ದಿವಸಗಳಲ್ಲಿ ಕಠಿನಕಾಲಗಳು ಬರುವವೆಂಬದನ್ನು ತಿಳಿದುಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದರೆ ಕಡೆಯ ದಿವಸಗಳಲ್ಲಿ ಕಷ್ಟಕರವಾದ ಕಾಲಗಳು ಬರುವುವೆಂಬುದನ್ನು ಸಹ ತಿಳಿದುಕೋ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತುಕಾ ಯಾದ್ ರ್‍ಹಾಂವ್ದಿತ್, ಆಕ್ರಿಚ್ಯಾ ದಿಸಾತ್ನಿ ಲೈ ತರಾಸ್ ಹಾಯ್. ಅಧ್ಯಾಯವನ್ನು ನೋಡಿ |
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.