2 ತಿಮೊಥೆಯನಿಗೆ 3:11 - ಪರಿಶುದ್ದ ಬೈಬಲ್11 ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಮಾಜೆ ವರ್‍ತಿ ಯೆಲ್ಲಿ ಸಂಕಟಾ, ಅನಿ ಕಸ್ಟಾ ತುಕಾ ಗೊತ್ತ್ ಹಾತ್. ಅಂತಿಯೊಕಾತ್, ಇಕೊನಿಯಾತ್, ಅನಿ ಲಿಸ್ತ್ರಾತ್ ಮಾಕಾ ಕಸ್ಲೊ ಕಸ್ಟ್ ಸೊಸ್ತಲೊ ಪಡ್ಲೊ ಕಾಯ್-ಕಾಯ್ ಹೊಲೆ ಮನ್ತಲೆ ಸಗ್ಳೆ ತುಕಾ ಗೊತ್ತ್ ಹಾಯ್. ಖರೆ ಧನಿಯಾನ್ ತ್ಯಾ ಸಗ್ಳ್ಯಾ ತರಾಸಾನಿತ್ನಾ ಮಾಕಾ ರಾಕ್ಲ್ಯಾನ್. ಅಧ್ಯಾಯವನ್ನು ನೋಡಿ |
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”