2 ತಿಮೊಥೆಯನಿಗೆ 3:15 - ಪರಿಶುದ್ದ ಬೈಬಲ್15 ಚಿಕ್ಕಂದಿನಿಂದಲೂ ನಿನಗೆ ಪವಿತ್ರ ಗ್ರಂಥದ ಪರಿಚಯವಿದೆ. ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಆ ಪವಿತ್ರ ಗ್ರಂಥವು ಶಕ್ತವಾಗಿದೆ. ಕ್ರಿಸ್ತ ಯೇಸುವಿನಲ್ಲಿನ ನಂಬಿಕೆಯ ಮೂಲಕ ಆ ಜ್ಞಾನವು ರಕ್ಷಣೆಯ ಕಡೆಗೆ ನಡೆಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಿಯಾ ಬಾರಿಕ್ ಹೊತ್ತ್ಯಾ ತನ್ನಾಚ್ಯಾನುಚ್ ತುಕಾ ಪವಿತ್ರ್ ಪುಸ್ತಕಾಚೆ ಜ್ಞಾನ್ ಶಿಕ್ವುನ್ ಹೊಲ್ಲೆ ಹಾಯ್, ತೆ ಜ್ಞಾನ್ ದಿತಾ ಅನಿ ತುಕಾ ಜೆಜು ಕ್ರಿಸ್ತಾಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಗಾವ್ತಲ್ಯಾ ಸುಟ್ಕೆಚ್ಯಾ ವಾಟೆನ್ ಚಾಲ್ವುನ್ ನ್ಹೆತಾ. ಅಧ್ಯಾಯವನ್ನು ನೋಡಿ |
ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.