Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:6 - ಪರಿಶುದ್ದ ಬೈಬಲ್‌

6 ಅವರಲ್ಲಿ ಕೆಲವರು ಮನೆಗಳಿಗೆ ನುಸುಳಿಕೊಂಡು ಹೋಗಿ, ಪಾಪಿಷ್ಠರಾದ ಸ್ತ್ರೀಯರನ್ನು ವಶಪಡಿಸಿಕೊಳ್ಳುತ್ತಾರೆ. ಆ ಸ್ತ್ರೀಯರು ಅನೇಕ ಪಾಪದೋಷಗಳಿಂದ ತುಂಬಿದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರಲ್ಲಿ ಕೆಲವರು ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇವರಲ್ಲಿ ಕೆಲವರು ಮನೆಮನೆಗಳಿಗೆ ನುಸಳಿ ನಾನಾ ಪಾಪಗಳಿಂದಲೂ ಕಾಮನೆಗಳಿಂದಲೂ ಕೂಡಿರುವ ಮತಿಗೆಟ್ಟ ಮಹಿಳೆಯರನ್ನು ವಶಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಫೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಇವರೊಳಗೆ ಸೇರಿದವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಂಥವರು ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ಪ್ರೇರಣೆ ಹೊಂದಿ ಸುಲಭವಾಗಿ ಮೋಸಹೋಗುವ ಸ್ತ್ರೀಯರನ್ನು ವಶಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತ್ಯೆಂಚ್ಯಾತ್ಲಿಚ್ ಉಲ್ಲಿ ಲೊಕಾ ಘರಾಘರಾಕ್ನಿ ಜಾವ್ನ್ ಪಾಪಾನಿ ಭರಲ್ಲೆ ಅನಿ ಅಸ್ಲ್ಯಾ ತಸ್ಲ್ಯಾ ಸಗ್ಳ್ಯಾ ಆಶಾತ್ನಿ ಗಾವುನ್ ಗುದ್ದ್ಯಾಡ್ತಲ್ಯಾ ಬಾಯ್ಕಾಮನ್ಸಾಕ್ನಿ ಅಪ್ನಾಚ್ಯಾ ತಾಬೆತ್ನಿ ಕರುನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:6
17 ತಿಳಿವುಗಳ ಹೋಲಿಕೆ  

ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಆ ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ಅಪೊಸ್ತಲರು ನಿಮಗೆ, “ಅಂತ್ಯಕಾಲದಲ್ಲಿ ದೇವರನ್ನು ಕುರಿತು ನಗುವ ಜನರಿರುತ್ತಾರೆ” ಎಂದು ಹೇಳಿದರು. ಈ ಜನರು ತಮ್ಮ ಇಚ್ಛೆಗನುಸಾರವಾದ ಮತ್ತು ದೇವರಿಗೆ ವಿರುದ್ಧವಾದವುಗಳನ್ನು ಮಾತ್ರ ಮಾಡುವವರಾಗಿರುತ್ತಾರೆ.


ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.


ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.


ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.


ನೀವು ವಿಶ್ವಾಸಿಗಳಾಗುವುದಕ್ಕಿಂತ ಮುಂಚೆ ನಿಮ್ಮ ಜೀವಿತವು ಹೇಗಿತ್ತೆಂಬುದನ್ನು ಜ್ಞಾಪಿಸಿಕೊಳ್ಳಿರಿ. ನಿಮಗಿಷ್ಟ ಬಂದಂತೆ ನಿರ್ಜೀವ ವಸ್ತುಗಳಾದ ವಿಗ್ರಹಗಳನ್ನು ಆರಾಧಿಸುತ್ತಿದ್ದಿರಿ.


ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಶ್ರೀಮಂತರಾಗಬೇಕೆನ್ನುವವರು ತಮ್ಮನ್ನು ತಾವೇ ಶೋಧನೆಗೆ ಗುರಿಪಡಿಸಿಕೊಳ್ಳುವರು. ಅವರು ಉರ್ಲಿನಲ್ಲಿ ಸಿಕ್ಕಿಹಾಕಿಕೊಂಡವರಾಗಿದ್ದಾರೆ. ಅವರು ಹಾನಿಕರವಾದ ಅನೇಕ ಮೂರ್ಖ ಆಸೆಗಳಲ್ಲಿ ಸಿಕ್ಕಿಬೀಳುವರು. ಅವು ಜನರನ್ನು ಹಾಳುಮಾಡಿ, ನಾಶಗೊಳಿಸುತ್ತವೆ.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.


ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.


ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ಆದರೆ ವಿಧವೆಯಾದವಳು ತನ್ನ ಇಚ್ಛೆಪೂರೈಕೆಗಾಗಿ ತನ್ನ ಜೀವಿತವನ್ನು ಬಳಸಿಕೊಳ್ಳುವುದಾದರೆ ಅವಳು ಬದುಕಿದ್ದರೂ ಸತ್ತಂತೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು