Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:7 - ಪರಿಶುದ್ದ ಬೈಬಲ್‌

7 ಆ ಸ್ತ್ರೀಯರು ಯಾವಾಗಲೂ ಹೊಸ ಉಪದೇಶಗಳನ್ನು ಕಲಿಯಲು ಪ್ರಯತ್ನಿಸಿದರೂ ಸತ್ಯವನ್ನು ಪೂರ್ಣವಾಗಿ ಅರ್ಥಮಾಡಿಕೊಳ್ಳಲು ಅವರಿಗೆ ಸಾಧ್ಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಮಹಿಳೆಯರಾದರೋ ಯಾರಿಗೆ ಬೇಕಾದರೂ ಕಿವಿಗೊಡುವರು. ಸತ್ಯವನ್ನು ಮಾತ್ರ ಮನಗಾಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಂಥ ಸ್ತ್ರೀಯರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಜ್ಞಾನಕ್ಕೆ ಬರಲಾರದವರು ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹಿ ಬಾಯ್ಕಾಮನ್ಸಾ ಕೊನಾಕ್ನಾಬಿ ಬರೆ ಶಿಕುಕ್ ಬಗುಲ್ಯಾತ್, ಖರೆ ಕನ್ನಾಬಿ ತೆ ಖರೆ ತೆಂಕಾ ಕಳ್ವುನ್ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:7
14 ತಿಳಿವುಗಳ ಹೋಲಿಕೆ  

ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ಎಲ್ಲಾ ಜನರು ರಕ್ಷಿಸಲ್ಪಡಬೇಕೆಂದು, ಸತ್ಯವನ್ನು ತಿಳಿದು ಕೊಳ್ಳಬೇಕೆಂದು ದೇವರು ಬಯಸುತ್ತಾನೆ.


ಈ ವಿಷಯದಲ್ಲಿ ನಾವು ನಿಮಗೆ ಹೇಳಬೇಕಾದ ಅನೇಕ ಸಂಗತಿಗಳಿವೆ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸದಿರುವುದರಿಂದ ವಿವರಿಸುವುದು ಕಷ್ಟಕರವಾಗಿದೆ.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?


ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು.


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


ಆದರೆ ಇಂದಿನ ತನಕವೂ ನೀವು ಅದನ್ನು ಸಂಪೂರ್ಣವಾಗಿ ಅರಿಯಲಿಲ್ಲ. ನೀವು ಕಂಡವುಗಳನ್ನು ಮತ್ತು ಕೇಳಿದವುಗಳನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳದಂತೆ ಯೆಹೋವನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು