Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:10 - ಪರಿಶುದ್ದ ಬೈಬಲ್‌

10 ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆಮಸ್ ಹ್ಯಾ ಜಗಾಚ್ಯಾ ಪ್ರೆಮಾತ್ ಪಡುನ್ ಗೆಲಾ ಅನಿ ಮಾಕಾ ಸೊಡುನ್ ತೊ ಥೆಸಲೊನಿಕಾ ಮನ್ತಲ್ಯಾ ಗಾವಾಕ್ ಗೆಲಾ. ಕ್ರೆಸೆನ್ಸ್ ಗಾಲಾತಾಕ್ ಗೆಲಾ, ಅನಿ ತಿತ್ ದಲ್ಮಾತ್ಸಿಯಾಕ್ ಗೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:10
32 ತಿಳಿವುಗಳ ಹೋಲಿಕೆ  

ಏಷ್ಯಾ ದೇಶದಲ್ಲಿರುವವರೆಲ್ಲರೂ ನನ್ನನ್ನು ತೊರೆದಿರುವರೆಂಬುದು ನಿನಗೆ ತಿಳಿದಿದೆ. ಪುಗೇಲನೂ, ಹೆರ್ಮೊಗೇನನೂ ನನ್ನನ್ನು ತೊರೆದಿದ್ದಾರೆ.


ಆದರೆ ನನ್ನ ಸಹೋದರನಾದ ತೀತನನ್ನು ನಾನು ಅಲ್ಲಿ ಕಾಣಲಿಲ್ಲವಾದ್ದರಿಂದ ನನಗೆ ಸಮಾಧಾನವಿರಲಿಲ್ಲ. ಆದ್ದರಿಂದ ನಾನು ಅವರನ್ನು ವಂದಿಸಿ ಮಕೆದೋನಿಯಕ್ಕೆ ಹೊರಟೆನು.


ಪೌಲನು ಮತ್ತು ಅವನ ಸಂಗಡಿಗರು ಫ್ರಿಜಿಯ ಮತ್ತು ಗಲಾತ್ಯ ಪ್ರಾಂತ್ಯಗಳ ಮೂಲಕ ಹಾದುಹೋದರು. ಏಷ್ಯಾ ಸೀಮೆಯಲ್ಲಿ ಸುವಾರ್ತೆಯನ್ನು ತಿಳಿಸದಂತೆ ಪವಿತ್ರಾತ್ಮನು ಅವರನ್ನು ತಡೆದನು.


ಮಾರ್ಕ, ಆರಿಸ್ತಾರ್ಕ, ದೇಮ, ಲೂಕ ಇವರುಗಳು ನಿನಗೆ ವಂದನೆ ತಿಳಿಸಿದ್ದಾರೆ. ಇವರೆಲ್ಲರೂ ನನ್ನ ಜೊತೆಕೆಲಸಗಾರರಾಗಿದ್ದಾರೆ.


ಮೊದಲ ಸಲ ನಾನು ನನ್ನನ್ನು ಸಮರ್ಥಿಸಿಕೊಂಡಾಗ ನನಗೆ ಯಾರೂ ಸಹಾಯಮಾಡಲಿಲ್ಲ. ಎಲ್ಲರೂ ನನ್ನನ್ನು ಬಿಟ್ಟುಹೋದರು. ದೇವರು ಅವರನ್ನು ಕ್ಷಮಿಸಲಿ ಎಂದು ಪ್ರಾರ್ಥಿಸುತ್ತೇನೆ.


ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ.


ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು.


ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.


ಪೌಲ ಸೀಲರು ಆಂಫಿಪೊಲಿ ಮತ್ತು ಅಪೊಲೋನಿಯ ಮಾರ್ಗವಾಗಿ ಪ್ರಯಾಣ ಮಾಡಿ ಥೆಸಲೋನಿಕ ಪಟ್ಟಣಕ್ಕೆ ಬಂದರು. ಆ ಪಟ್ಟಣದಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.


ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.


ನಾನು ಈ ಪತ್ರವನ್ನು ತೀತನಿಗೆ ಬರೆಯುತ್ತಿದ್ದೇನೆ. ನಮ್ಮೆಲ್ಲರ ನಂಬಿಕೆಯ ಸಂಬಂಧದಲ್ಲಿ ನೀನು ನನಗೆ ನಿಜವಾದ ಮಗನಂತಿರುವೆ. ನಮ್ಮ ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಲಭಿಸಲಿ.


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.


ನಾನು ಮತ್ತು ನನ್ನೊಂದಿಗಿರುವ ಎಲ್ಲಾ ಸಹೋದರರು ಈ ಪತ್ರವನ್ನು ಗಲಾತ್ಯದಲ್ಲಿರುವ ಸಭೆಗಳವರಿಗೆ ಬರೆದಿದ್ದೇವೆ.


ನಿಮ್ಮ ಮೇಲೆ ನನಗಿರುವ ಪ್ರೀತಿಯನ್ನು ದೇವರು ತೀತನಿಗೂ ಕೊಟ್ಟದ್ದಕ್ಕಾಗಿ ದೇವರನ್ನು ಸ್ತುತಿಸುತ್ತೇನೆ.


ಆದ್ದರಿಂದ, ವಿಶೇಷವಾದ ಈ ಕೃಪಾಕಾರ್ಯವನ್ನು ಪೂರೈಸಲು ನಿಮಗೆ ಸಹಾಯ ಮಾಡಬೇಕೆಂದು ನಾವು ತೀತನನ್ನು ಕೇಳಿಕೊಂಡೆವು. ಈ ಕಾರ್ಯವನ್ನು ಪ್ರಾರಂಭಿಸಿದವನು ತೀತನೇ.


ಅಲ್ಲಿ ಅವನು ಸ್ವಲ್ಪಕಾಲವಿದ್ದನು. ಬಳಿಕ ಅಲ್ಲಿಂದ ಹೊರಟು ಗಲಾತ್ಯ ಮತ್ತು ಫ್ರಿಜಿಯ ನಾಡುಗಳಲ್ಲಿ ಸಂಚರಿಸುತ್ತಾ ಯೇಸುವಿನ ಶಿಷ್ಯರೆಲ್ಲರನ್ನು ಬಲಪಡಿಸಿದನು.


ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.


ಆದರೆ ಅವರ ಮೊದಲನೆ ಪ್ರಯಾಣದಲ್ಲಿ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಪಾಂಫೀಲಿಯದ ಬಳಿ ಬಿಟ್ಟುಹೋದನು. ಅವನು ಅವರೊಂದಿಗೆ ಸೇವೆಯಲ್ಲಿ ಮುಂದುವರಿಯಲಿಲ್ಲ. ಆದ್ದರಿಂದ ಅವನನ್ನು ಕರೆದುಕೊಂಡು ಹೋಗುವುದು ಒಳ್ಳೆಯ ಆಲೋಚನೆಯಲ್ಲವೆಂದು ಪೌಲನು ಯೋಚಿಸಿದನು.


ಪೌಲ ಮತ್ತು ಅವನ ಸಂಗಡಿಗರು ಪಾಫೋಸಿನಿಂದ ನೌಕಾಯಾನ ಮಾಡಿದರು. ಪಾಂಫೀಲಿಯ ಪ್ರಾಂತ್ಯದಲ್ಲಿದ್ದ ಪೆರ್ಗ ಎಂಬ ಪಟ್ಟಣಕ್ಕೆ ಅವರು ಬಂದರು. ಆದರೆ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಬಿಟ್ಟು ಜೆರುಸಲೇಮಿಗೆ ಹಿಂತಿರುಗಿದನು.


ಲೋಟನ ಹೆಂಡತಿಗೆ ಸಂಭವಿಸಿದ್ದು ಜ್ಞಾಪಕವಿದೆಯೇ?


“ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.”


“ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!


ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.


ನಾನು ತೀತನ ಬಗ್ಗೆ ಹೇಳುವುದೇನೆಂದರೆ, ಅವನು ನನ್ನ ಜೊತೆಕೆಲಸಗಾರನಾಗಿದ್ದಾನೆ. ನಿಮಗೆ ಸಹಾಯ ಮಾಡಲು ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ. ಇತರ ಸಹೋದರರ ಬಗ್ಗೆ ನಾನು ಹೇಳುವುದೇನೆಂದರೆ, ಅವರು ಸಭೆಗಳಿಂದ ಕುಳುಹಿಸಲ್ಪಟ್ಟವರಾಗಿದ್ದಾರೆ ಮತ್ತು ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುವಂಥವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು