2 ತಿಮೊಥೆಯನಿಗೆ 4:14 - ಪರಿಶುದ್ದ ಬೈಬಲ್14 ಕಂಚುಗಾರನಾದ ಅಲೆಗ್ಸಾಂಡರನು ನನಗೆ ಅನೇಕ ಕೆಡಕುಗಳನ್ನು ಮಾಡಿದನು. ಅವನು ಮಾಡಿದ ಕೃತ್ಯಗಳಿಗಾಗಿ ಪ್ರಭುವು ಅವನನ್ನು ದಂಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಪಿತ್ಳಿಚೆ ಕಾಮ್ ಕರ್‍ತಲ್ಯಾ ಅಲೆಗ್ಸಾಂಡರಾನ್ ಮಾಕಾ ವಾಯ್ಟ್ ಕರ್‍ಲ್ಯಾನಾಯ್. ತೆನಿ ಕರಲ್ಲ್ಯಾ ಹ್ಯಾ ಕಾಮಾಂಚ್ಯಾಸಾಟಿ ಧನಿಚ್ ತೆಕಾ ಪಾಜೆ ಹೊಲ್ಲಿ ಮಜುರಿ ದಿತಾ. ಅಧ್ಯಾಯವನ್ನು ನೋಡಿ |
ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.