Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:1 - ಪರಿಶುದ್ದ ಬೈಬಲ್‌

1 ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ಮತ್ತು ತಿಮೊಥೆ ಎಂಬ ನಾವು ಬರೆಯುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಮ್ಮ ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗು ತಿಮೊಥೇಯರು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಮ್ಮ ತಂದೆ ದೇವರಲ್ಲಿಯೂ, ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಪಾವ್ಲು, ಸಿಲಾಸ್ ಅನಿ ತಿಮೊತಿ, ದೆವಾ ಅಮ್ಚ್ಯಾ ಬಾಬಾ, ಅನಿ ಜೆಜು ಕ್ರಿಸ್ತಾಕ್ ಸಮಂದ್ ಪಡಲ್ಲ್ಯಾ ಥೆಸಾಲೊನಿಕಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಸಾಂಗ್ತಲೆ ಕಾಯ್ ಮಟ್ಲ್ಯಾರ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:1
5 ತಿಳಿವುಗಳ ಹೋಲಿಕೆ  

ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.


ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.


ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


ಪೌಲ ಸೀಲರು ಆಂಫಿಪೊಲಿ ಮತ್ತು ಅಪೊಲೋನಿಯ ಮಾರ್ಗವಾಗಿ ಪ್ರಯಾಣ ಮಾಡಿ ಥೆಸಲೋನಿಕ ಪಟ್ಟಣಕ್ಕೆ ಬಂದರು. ಆ ಪಟ್ಟಣದಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು