2 ಥೆಸಲೋನಿಕದವರಿಗೆ 1:9 - ಪರಿಶುದ್ದ ಬೈಬಲ್9 ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9-10 ಆ ದಿನದಲ್ಲಿ ಆತನು ತನ್ನ ಪವಿತ್ರರ ಮೂಲಕ ಪ್ರಭಾವ ಹೊಂದುವವನಾಗಿಯೂ ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವವನಾಗಿಯೂ ಬರುವಾಗ ಅಂಥವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೆಂಕಾ ಧನಿಯಾಚ್ಯಾ ಇದ್ರಾಕ್ ನಾ ಅನಿ ತೆಚ್ಯಾ ಮೊಟ್ಯಾ ಮಹಿಮೆತ್ನಾ ಕಾಡುನ್ ಕನ್ನಾಚ್ ಕಮಿ ಹೊಯ್ನಸಲ್ಲ್ಯಾ ನಾಸಾಚ್ಯಾ ಶಿಕ್ಷಾತ್ ಘಾಲುನ್ ಹೊತಾ. ಅಧ್ಯಾಯವನ್ನು ನೋಡಿ |
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.