Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:8 - ಪರಿಶುದ್ದ ಬೈಬಲ್‌

8 ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೊ ವಿರೊದಿ ನದ್ರೆಕ್ ಪಡ್ತಾ, ಖರೆ ತವ್ಡ್ಯಾಕ್ ಮಟ್ಲ್ಯಾರ್ ಜೆಜು ಅಪ್ನಾಚ್ಯಾ ತೊಂಡಾಚ್ಯಾ ಶ್ವಾಸಾನ್ ತೆಚೊ ಜಿವ್ ಕಾಡ್ತಾ ಅನಿ ಅಪ್ನಿ ಯೆತಲೊ ಹಾಯ್ ತ್ಯಾ ಮಹಿಮೆನ್ ತೆಕಾ ನಾಸ್ ಕರುನ್ ಟಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:8
34 ತಿಳಿವುಗಳ ಹೋಲಿಕೆ  

ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ.


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ಆದ್ದರಿಂದ ನಿನ್ನ ಮನಸ್ಸನ್ನು ಪರಿವರ್ತಿಸಿಕೊ! ಇಲ್ಲವಾದರೆ, ನಾನು ತ್ವರಿತವಾಗಿ ನಿನ್ನಲ್ಲಿಗೆ ಬಂದು, ನನ್ನ ಬಾಯಿಂದ ಹೊರಗೆ ಬರುವ ಖಡ್ಗದಿಂದ ಆ ಜನರ ವಿರುದ್ಧ ಹೋರಾಡುತ್ತೇನೆ.


ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ.


ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.


“‘ಆಮೇಲೆ ಏನಾಗಬೇಕೆಂಬುದನ್ನು ನ್ಯಾಯಸಭೆಯು ನಿರ್ಣಯಿಸುವುದು. ಆ ರಾಜನ ಅಧಿಕಾರವನ್ನು ಕಸಿದುಕೊಳ್ಳಲಾಗುವುದು. ಅವನ ಸಾಮ್ರಾಜ್ಯವು ಸಂಪೂರ್ಣವಾಗಿ ಕೊನೆಗೊಳ್ಳುವುದು.


ದೇವರ ಉಸಿರು ಅವರನ್ನು ಕೊಲ್ಲುತ್ತದೆ; ಆತನ ಕೋಪದ ಗಾಳಿಯು ಅವರನ್ನು ನಾಶಮಾಡುತ್ತದೆ.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.


ತಂದೆಗಳೇ, ಆದಿಯಿಂದ ಇರುವಾತನನ್ನು ನೀವು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯುವಕರೇ, ನೀವು ಕೆಡುಕನನ್ನು ಸೋಲಿಸಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.


ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ನಮ್ಮ ಪ್ರಭುವಾದ ಯೇಸುಕ್ರಿಸ್ತನು ಮತ್ತೆ ಪ್ರತ್ಯಕ್ಷನಾಗುವ ಕಾಲದವರೆಗೆ ನೀನು ಆ ಕಾರ್ಯಗಳನ್ನು ತಪ್ಪಿಲ್ಲದೆ, ನಿಂದಾರಹಿತನಾಗಿ ಮಾಡುತ್ತಿರು.


ಆ ಹೊಲ ಈ ಲೋಕವಾಗಿದೆ. ಒಳ್ಳೆಯ ಕಾಳುಗಳೇ ಪರಲೋಕರಾಜ್ಯಕ್ಕೆ ಸೇರಿದ ದೇವರ ಮಕ್ಕಳು. ಕೆಡುಕನಿಗೆ ಸಂಬಂಧಪಟ್ಟವರೇ ಹಣಜಿಗಳು.


“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.


ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.


ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.


ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಾಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.


ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.


“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.


ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೋ ಯಾವುದನ್ನು ದ್ವೇಷಿಸುತ್ತದೆಯೋ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೋ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು.


ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡಲು ಅವಕಾಶ ನೀಡಲಾಯಿತು. ಆ ಮೃಗಕ್ಕೆ ಅದರ ಶಕ್ತಿಯನ್ನು ನಲವತ್ತೆರಡು ತಿಂಗಳ ಕಾಲ ಬಳಸಲು ಅವಕಾಶ ನೀಡಲಾಯಿತು.


ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದರೆ, ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಆ ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು