2 ಥೆಸಲೋನಿಕದವರಿಗೆ 3:16 - ಪರಿಶುದ್ದ ಬೈಬಲ್16 ಶಾಂತಿದಾಯಕನಾದ ಪ್ರಭುವು ಎಲ್ಲಾ ಕಾಲಗಳಲ್ಲಿಯೂ ಮತ್ತು ಎಲ್ಲಾ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭುವು ನಿಮ್ಮೆಲ್ಲರೊಂದಿಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಸಮಾದಾನಾಚೊ ಮುಳ್ ಹೊವ್ನ್ ಹೊತ್ತೊ ಧನಿ ಸಗ್ಳ್ಯಾ ಎಳಾರ್ ಅನಿ ಸಗ್ಳ್ಯಾ ವಾಟೆನಿ ತುಮ್ಕಾ ಸಮಾದಾನ್ ದಿಂವ್ದಿತ್. ಧನಿ ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.