Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:17 - ಪರಿಶುದ್ದ ಬೈಬಲ್‌

17 ಪೌಲನಾದ ನಾನು ಈಗ ನನ್ನ ಕೈಬರಹದಿಂದ ಈ ಪತ್ರವನ್ನು ಮುಕ್ತಾಯಗೊಳಿಸುತ್ತೇನೆ. ನನ್ನ ಪತ್ರಗಳಿಗೆಲ್ಲಾ ಇದೇ ನನ್ನ ಗುರುತು. ಇದೇ ನನ್ನ ಕೈ ಬರಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ; ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ನನ್ನ ಕೈಬರಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದ ಬರೆದ ವಂದನೆಯಿದು. ನನ್ನ ಎಲ್ಲಾ ಪತ್ರಗಳಲ್ಲಿಯೂ ಇದೇ ಗುರುತು. ನಾನು ಹೀಗೆಯೇ ಬರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಿಯಾ ಪಾವ್ಲು ಮಾಜ್ಯಾ ಸ್ವತಾಚ್ಯಾ ಹಾತಿನಿ ತುಮ್ಕಾ ನಮಸ್ಕಾರ್ ಲಿವ್ಲಾ: ಮಿಯಾ ಅಸೆಚ್ ಸಗ್ಳ್ಯಾ ಚಿಟಿಯಾ ವೈನಿ ಬಿ ಸಹಿ ಕರ್‍ತಾ, ಅನಿ ಮಿಯಾ ಲಿವ್ತಲೆ ಅಸೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:17
7 ತಿಳಿವುಗಳ ಹೋಲಿಕೆ  

ಪೌಲನಾದ ನಾನು ನನ್ನ ಕೈಯಾರೆ ಈ ವಂದನೆಗಳನ್ನು ಬರೆಯುತ್ತಿದ್ದೇನೆ.


ದೇವರು ನ್ಯಾಯವಾದ ತೀರ್ಪನ್ನು ನೀಡುತ್ತಾನೆಂಬುದಕ್ಕೆ ಅದೇ ಪ್ರಮಾಣವಾಗಿದೆ. ದೇವರ ರಾಜ್ಯಕ್ಕೆ ನೀವು ಯೋಗ್ಯರಾಗಿರಬೇಕೆಂಬುದು ಆತನ ಅಪೇಕ್ಷೆ. ನೀವು ಹಿಂಸೆಪಡುತ್ತಿರುವುದು ಆ ರಾಜ್ಯಕ್ಕೋಸ್ಕರವೇ.


ನಿಮಗೆ ನನ್ನ ವಂದನೆಗಳು. ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.


ನಿನ್ನ ಸಹೋದರರ ಸಹಸ್ರಾಧಿಪತಿಗೆ ಹತ್ತು ಉಂಡೆ ಗಿಣ್ಣನ್ನೂ ತೆಗೆದುಕೊಂಡು ಹೋಗು. ನಿನ್ನ ಸಹೋದರರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು, ಅವರು ಕ್ಷೇಮವಾಗಿದ್ದಾರೆಂಬುದಕ್ಕೆ ಒಂದು ಗುರುತನ್ನು ತೆಗೆದುಕೊಂಡು ಬಾ.


ಈಗ ನೀವು ನನಗೊಂದು ಪ್ರಮಾಣ ಮಾಡಬೇಕು. ನಾನು ನಿಮಗೆ ದಯೆತೋರಿ ಸಹಾಯ ಮಾಡಿದೆ. ಆದ್ದರಿಂದ ನೀವು ಸಹ ನನ್ನ ಕುಟುಂಬದವರಿಗೆ ದಯೆತೋರುವಿರೆಂಬುದಕ್ಕೆ ಒಂದು ಗುರುತನ್ನು ಕೊಡಿರಿ.


ಪೌಲನು ಹೇಳುತ್ತಿರುವ ಸಂಗತಿಗಳನ್ನು ಬರೆಯುತ್ತಿರುವ ತೆರ್ತ್ಯೆನೆಂಬ ನಾನು ನಿಮ್ಮನ್ನು ಪ್ರಭುವಿನಲ್ಲಿ ವಂದಿಸುತ್ತೇನೆ.


ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು