Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:11 - ಪರಿಶುದ್ದ ಬೈಬಲ್‌

11 ಆಗ ದೇವರು ಸೊಲೊಮೋನನಿಗೆ, “ನಿನ್ನ ಕೋರಿಕೆ ಒಳ್ಳೆಯದಾಗಿದೆ. ನೀನು ಐಶ್ವರ್ಯವನ್ನಾಗಲಿ ಗೌರವವನ್ನಾಗಲಿ ಬೆಳ್ಳಿಬಂಗಾರಗಳನ್ನಾಗಲಿ ಕೇಳಲಿಲ್ಲ. ನಿನ್ನ ವೈರಿಗಳನ್ನು ನಿರ್ಮೂಲ ಮಾಡುವಂತಾಗಲಿ ಅಥವಾ ನಿನಗೆ ದೀರ್ಘಾಯುಷ್ಯವನ್ನು ಕೊಡು ಎಂದಾಗಲಿ ನೀನು ಕೇಳಿಕೊಳ್ಳದೆ ರಾಜ್ಯವನ್ನು ನ್ಯಾಯವಾಗಿ ಆಳಲು ಬೇಕಾದ ಜ್ಞಾನವಿವೇಕಗಳನ್ನು ಕೇಳಿಕೊಂಡೆ. ನಾನು ಆರಿಸಿಕೊಂಡಿರುವ ಜನಾಂಗದ ಮೇಲೆ ಆಡಳಿತ ನಡಿಸುವಾಗ ಯೋಗ್ಯವಾದ ಸಲಹೆ ಕೊಡುವಂತೆ ಜ್ಞಾನವನ್ನು ಕೇಳಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ದೇವರು ಸೊಲೊಮೋನನಿಗೆ, “ನೀನು ಘನಧನೈಶ್ವರ್ಯಗಳನ್ನಾಗಲಿ, ಶತ್ರುಗಳ ವಿನಾಶವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳಲಿಲ್ಲ. ಬದಲಿಗೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ನಿನಗಾಗಿ ಬೇಡಿಕೊಂಡೆ. ಆದುದರಿಂದ ಅವು ನಿನಗೆ ದೊರಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ದೇವರು ಸೊಲೊಮೋನನಿಗೆ - ನೀನು ಘನಧನೈಶ್ವರ್ಯಗಳನ್ನಾಗಲಿ ವೈರಿಗಳ ಪ್ರಾಣಹರಣವನ್ನಾಗಲಿ ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳದೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವದಕ್ಕೋಸ್ಕರ ಜ್ಞಾನವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ಬೇಡಿಕೊಂಡದರಿಂದ ಅವು ನಿನಗೆ ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಹೃದಯದಲ್ಲಿ ಇದ್ದುದರಿಂದಲೂ ನೀನು ಐಶ್ವರ್ಯವನ್ನೂ, ಸ್ಥಿತಿಯನ್ನೂ, ಘನವನ್ನೂ, ನಿನ್ನ ಶತ್ರುಗಳ ಪ್ರಾಣವನ್ನೂ ಕೇಳದೆ ಮತ್ತು ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ, ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ, ಆ ನನ್ನ ಜನರಿಗೆ ನೀನು ನ್ಯಾಯತೀರಿಸುವ ಹಾಗೆ, ಜ್ಞಾನವನ್ನೂ, ತಿಳುವಳಿಕೆಯನ್ನೂ ನೀನು ಕೇಳಿದ್ದರಿಂದಲೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:11
15 ತಿಳಿವುಗಳ ಹೋಲಿಕೆ  

ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.


ಅವನು ವೆಚ್ಚದ ಬಗ್ಗೆ ಯೋಚಿಸುವಂಥವನು. ಅವನು ನಿನಗೆ, “ತಿನ್ನು, ಕುಡಿ” ಎಂದು ಹೇಳಿದರೂ ಅವನ ಉದ್ದೇಶವೇ ಬೇರೆ.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ.


ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.


ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.


ನೀನು ಜಮೀನನ್ನು ಮಾರುವುದಕ್ಕಿಂತ ಮೊದಲು ಅದು ನಿನ್ನದೇ ಆಗಿತ್ತು. ನೀನು ಮಾರಿದ ಮೇಲೆಯೂ ಬಂದ ಹಣ ನಿನ್ನದೇ ಆಗಿತ್ತು. ಈ ಕೆಟ್ಟಕಾರ್ಯವನ್ನು ಮಾಡಲು ನೀನು ಯಾಕೆ ಯೋಚಿಸಿಕೊಂಡೆ? ನೀನು ಸುಳ್ಳು ಹೇಳಿದ್ದು ದೇವರಿಗೆ, ಮನುಷ್ಯರಿಗಲ್ಲ!” ಎಂದು ಹೇಳಿದನು.


ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.


ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನೆಂದರೆ, “ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಆ ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು.


ಆದರೆ ಯೆಹೋವನು ನನ್ನ ತಂದೆಗೆ, ‘ನೀನು ನನ್ನ ಮಹಿಮೆಗಾಗಿ ಆಲಯವೊಂದನ್ನು ನಿರ್ಮಿಸಲು ಬಹಳ ಅಪೇಕ್ಷೆಪಟ್ಟಿರುವುದು ನನಗೆ ತಿಳಿದಿದೆ. ನನಗೋಸ್ಕರ ಆಲಯವನ್ನು ಕಟ್ಟಲು ನೀನು ಅಪೇಕ್ಷಿಸಿರುವುದು ಒಳ್ಳೆಯದೇ ಆಗಿದೆ.


ನಾನು ನಿನಗೆ ಜ್ಞಾನವಿವೇಕಗಳನ್ನು ಕೊಡುವೆನು. ಅದರ ಜೊತೆಯಲ್ಲಿ ನಿನಗೆ ಐಶ್ವರ್ಯವನ್ನೂ ಘನತೆಯನ್ನೂ ದಯಪಾಲಿಸುವೆನು. ನಿನಗಿಂತ ಮುಂಚೆ ಇದ್ದ ಯಾವ ಅರಸನಿಗೂ ಇಂಥಾ ಐಶ್ವರ್ಯಗಳಾಗಲಿ ಘನತೆಯಾಗಲಿ ಇರಲಿಲ್ಲ. ಮತ್ತು ಇನ್ನು ಮುಂದೆಯೂ ಯಾವ ರಾಜನಿಗೂ ಇಂಥಾ ಘನತೆ ಮತ್ತು ಐಶ್ವರ್ಯಗಳಿರುವುದಿಲ್ಲ” ಎಂದು ಹೇಳಿದನು.


ಭೂಲೋಕದವರೆಲ್ಲರೂ ರಾಜನಾದ ಸೊಲೊಮೋನನನ್ನು ನೋಡುವುದಕ್ಕೂ ದೇವರು ಸೊಲೊಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅಪೇಕ್ಷಿಸುತ್ತಿದ್ದರು.


ನನ್ನ ಸಹಾಯದಿಂದ ರಾಜರುಗಳು ರಾಜ್ಯವಾಳುವರು; ಅಧಿಪತಿಗಳು ನ್ಯಾಯವಾದ ಕಾನೂನುಗಳನ್ನು ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು