2 ಪೂರ್ವಕಾಲ ವೃತ್ತಾಂತ 1:8 - ಪರಿಶುದ್ದ ಬೈಬಲ್8 ಆಗ ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನ ಮೇಲೆ ಮಹಾಕೃಪೆಯನ್ನು ತೋರಿ ಅವನ ಸ್ಥಾನದಲ್ಲಿ ಅರಸನಾಗುವದಕ್ಕೆ ನನ್ನನ್ನು ಆರಿಸಿಕೊಂಡಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸೊಲೊಮೋನನು, “ನೀವು ನನ್ನ ತಂದೆ ದಾವೀದನಿಗೆ ಮಹಾಕೃಪೆಯನ್ನು ತೋರಿಸಿದಿರಿ. ಅವರ ಸ್ಥಾನದಲ್ಲಿ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ನನ್ನ ತಂದೆಯಾದ ದಾವೀದನಿಗೆ ಮಹಾಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನನ್ನನ್ನು ಅರಸನನ್ನಾಗಿ ನೇವಿುಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದಕ್ಕೆ ಸೊಲೊಮೋನನು ದೇವರಿಗೆ, “ನೀವು ನನ್ನ ತಂದೆ ದಾವೀದನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ, ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿರಿ. ಅಧ್ಯಾಯವನ್ನು ನೋಡಿ |
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.