2 ಪೂರ್ವಕಾಲ ವೃತ್ತಾಂತ 1:9 - ಪರಿಶುದ್ದ ಬೈಬಲ್9 ದೇವರಾದ ಯೆಹೋವನೇ ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿರುವ ವಾಗ್ದಾನವನ್ನು ನೆರವೇರಿಸು. ಒಂದು ದೊಡ್ಡ ರಾಜ್ಯಕ್ಕೆ ನನ್ನನ್ನು ಅರಸನನ್ನಾಗಿ ನೇಮಿಸಿರುತ್ತೀ. ಅದರಲ್ಲಿ ಭೂಮಿಯ ಧೂಳಿನೋಪಾದಿಯಲ್ಲಿ ಜನರು ತುಂಬಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗೆ ಇರಲಾಗಿ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಧರೆಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗಿರಲಾಗಿ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಭೂವಿುಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇವಿುಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈಗ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವು ದೃಢವಾಗಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯಾತ ಜನರ ಮೇಲೆ ನನ್ನನ್ನು ಅರಸನನ್ನಾಗಿ ಮಾಡಿದ್ದೀರಿ. ಅಧ್ಯಾಯವನ್ನು ನೋಡಿ |