Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:11 - ಪರಿಶುದ್ದ ಬೈಬಲ್‌

11 ನನ್ನ ತಂದೆಯು ಭಾರವಾದ ನೊಗವನ್ನು ನಿಮ್ಮ ಮೇಲೆ ಹೊರಿಸಿದನು. ನಾನಾದರೋ ಅದನ್ನು ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಶಿಕ್ಷಿಸಿದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಶಿಕ್ಷಿಸುವೆನು’ ಎಂದು ಹೇಳು” ಎಂಬುದಾಗಿ ಸಲಹೆ ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು", ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂಬದಾಗಿ ಹೇಳಬೇಕು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:11
14 ತಿಳಿವುಗಳ ಹೋಲಿಕೆ  

ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು.


ಜನಗಳಿಗೆ ಐದು ತಿಂಗಳ ಕಾಲ ನೋವು ಉಂಟುಮಾಡುವಂತಹ ಶಕ್ತಿಯನ್ನು ಈ ಮಿಡತೆಗಳಿಗೆ ಕೊಡಲಾಯಿತು. ಆದರೆ ಜನರನ್ನು ಕೊಲ್ಲುವ ಶಕ್ತಿಯನ್ನು ಮಿಡತೆಗಳಿಗೆ ಕೊಡಲಿಲ್ಲ. ಈ ಮಿಡತೆಗಳು ಕುಟುಕಿದಾಗ ಚೇಳು ಕುಟುಕಿದಷ್ಟೇ ನೋವಾಗುತ್ತಿತ್ತು.


ನಂತರ ಮಿಡತೆಗಳು ಹೊಗೆಯೊಳಗಿಂದ ಭೂಮಿಯ ಮೇಲಕ್ಕೆ ಬಂದಿಳಿದವು. ಅವುಗಳಿಗೆ ಚೇಳುಗಳಂತೆ ಕುಟುಕುವ ಶಕ್ತಿಯನ್ನು ಕೊಡಲಾಯಿತು.


ಕೇಳಿರಿ! ಹಾವುಗಳ ಮತ್ತು ಚೇಳುಗಳ ಮೇಲೆ ನಡೆಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ವೈರಿಗಿರುವ ಅಧಿಕಾರಕ್ಕಿಂತಲೂ (ಸೈತಾನ) ಹೆಚ್ಚಿನ ಅಧಿಕಾರವನ್ನು ನಿಮಗೆ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದಿಲ್ಲ.


ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


“ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ರಾಜನು ಬೇಕೆಂದು ಕೇಳಿಕೊಂಡದ್ದಕ್ಕಾಗಿ ಗೋಳಾಡುವಿರಿ. ಆದರೆ ಆಗ ಯೆಹೋವನು ನಿಮಗೆ ಉತ್ತರಿಸುವುದಿಲ್ಲ” ಎಂದು ಹೇಳಿದನು.


ಈಗ ನಿಮ್ಮ ಕೆಲಸಕ್ಕೆ ಹೋಗಿರಿ! ನಾವು ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೆ ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಉತ್ತರಿಸಿದನು.


ಆ ಯೌವನಸ್ಥರು, “ನೀನು ಅವರಿಗೆ, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಕಿರಿಬೆರಳು ದಪ್ಪವಾಗಿದೆ.


ಮೂರು ದಿವಸಗಳ ಬಳಿಕ ಯಾರೊಬ್ಬಾಮನೂ ಎಲ್ಲಾ ಇಸ್ರೇಲರು ರೆಹಬ್ಬಾಮನ ಬಳಿಗೆ ಬಂದರು. “ಮೂರು ದಿನಗಳ ನಂತರ ಬನ್ನಿ” ಎಂದು ರೆಹಬ್ಬಾಮನೇ ಅವರಿಗೆ ಹೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು