Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:15 - ಪರಿಶುದ್ದ ಬೈಬಲ್‌

15 ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅರಸನು ಜನರ ಮಾತನ್ನು ಕೇಳದೆಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನು ಜನರ ಮಾತನ್ನು ಕೇಳದೆಹೋದದ್ದು ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:15
20 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನು ಬೇರೊಬ್ಬನ ವಿರುದ್ಧ ಅಪರಾಧ ಮಾಡಿದರೆ, ಯೆಹೋವನು ಅವನಿಗೆ ಸಹಾಯ ಮಾಡಬಹುದು, ಆದರೆ ಒಬ್ಬ ಮನುಷ್ಯನು ಯೆಹೋವನ ವಿರುದ್ಧವೇ ಅಪರಾಧ ಮಾಡಿದರೆ, ಆಗ ಅವನಿಗೆ ಸಹಾಯ ಮಾಡುವವರು ಯಾರು?” ಎಂದು ಬುದ್ಧಿಮಾತು ಹೇಳಿದನು. ಆದರೆ ಏಲಿಯ ಮಾತನ್ನು ಅವನ ಮಕ್ಕಳು ಕೇಳಲಿಲ್ಲ. ಆದ್ದರಿಂದ ಯೆಹೋವನು ಏಲಿಯ ಮಕ್ಕಳನ್ನು ಕೊಲ್ಲಲು ನಿರ್ಧರಿಸಿದನು.


ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.


ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


ಯೆಹೋವನು ಅವರಿಗೆ, ‘ನಿಮ್ಮಲ್ಲಿ ಯಾರಾದರೂ ರಾಜನಾದ ಅಹಾಬನನ್ನು ಪ್ರೇರೇಪಿಸುವಿರಾ? ಅವನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋಗಬೇಕೆಂದು ನಾನು ಅಪೇಕ್ಷೆಪಟ್ಟಿದ್ದೇನೆ. ಅಲ್ಲಿ ಅವನು ಕೊಲ್ಲಲ್ಪಡುವನು’ ಎಂದು ಹೇಳಿದನು. ತಾವು ಏನು ಮಾಡಬೇಕೆಂಬುದರ ಬಗ್ಗೆ ದೂತರಲ್ಲಿ ಒಮ್ಮತದ ಅಭಿಪ್ರಾಯವುಂಟಾಗಲಿಲ್ಲ.


ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.


ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.


ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.


ಆದ್ದರಿಂದ ಸೈನಿಕರು, “ನಾವು ಇದನ್ನು ಹರಿದು ಪಾಲುಮಾಡಬಾರದು. ನಾವು ಚೀಟಿಹಾಕಿ ಇದು ಯಾರಿಗೆ ಬರುತ್ತದೋ ನೋಡೋಣ” ಎಂದು ಮಾತಾಡಿಕೊಂಡು ಹಾಗೆಯೇ ಮಾಡಿದರು. “ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲು ಮಾಡಿಕೊಂಡರು; ನನ್ನ ಅಂಗಿಗಾಗಿ ಚೀಟಿ ಹಾಕಿದರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ಮಾತು ಹೀಗೆ ನೆರವೇರಿತು.


ಸೊಲೊಮೋನನು ಪ್ರಾರಂಭದಿಂದ ಅಂತ್ಯದ ತನಕ ಮಾಡಿದ ಎಲ್ಲಾ ವಿಷಯಗಳನ್ನು ಪ್ರವಾದಿಯಾದ ನಾತಾನನು ಬರೆದ ಲೇಖನಗಳಲ್ಲಿಯೂ, ಶೀಲೋವದ ಅಹೀಯನ ಪ್ರವಾದನೆಯಲ್ಲಿಯೂ ಮತ್ತು ದೇವದರ್ಶಿಯಾದ ಇದ್ದೋವಿನ ದರ್ಶನಗಳ ಪುಸ್ತಕದಲ್ಲಿಯೂ ಬರೆಯಲಾಗಿದೆ. ದೇವದರ್ಶಿಯಾದ ಇದ್ದೋ, ನೆಬಾಟನ ಮಗನಾದ ಯಾರೊಬ್ಬಾಮನ ವಿಷಯವಾಗಿಯೂ ಬರೆದಿದ್ದಾನೆ.


“ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.


ಯೌವನಸ್ಥರು ಹೇಳಿದ ಪ್ರಕಾರ ರೆಹಬ್ಬಾಮನು ಅವರಿಗೆ, “ನನ್ನ ತಂದೆಯು ನಿಮಗೆ ಭಾರವಾದ ನೊಗವನ್ನು ಹೊರಿಸಿದನು. ನಾನಾದರೋ ಅದನ್ನು ಇನ್ನೂ ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಹೊಡೆದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಹೊಡೆಯುವೆನು” ಅಂದನು.


ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಸಹೋದರರೊಂದಿಗೆ ನೀವು ಯುದ್ಧಮಾಡಬಾರದು. ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಲಿ. ಯಾಕೆಂದರೆ ಇದನ್ನು ನಾನೇ ಮಾಡಿದ್ದೇನೆ.” ರೆಹಬ್ಬಾಮನೂ ಅವನೊಂದಿಗಿದ್ದ ಸೈನಿಕರೂ ಯೆಹೋವನ ಸಂದೇಶವನ್ನು ಕೇಳಿ ಹಿಂತಿರುಗಿದರು. ಅವರು ಯಾರೊಬ್ಬಾಮನೊಂದಿಗೆ ಯುದ್ಧಮಾಡಲಿಲ್ಲ.


ಯೋರಾಮನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾಮನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.


ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು