Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:16 - ಪರಿಶುದ್ದ ಬೈಬಲ್‌

16 ರಾಜನಾದ ರೆಹಬ್ಬಾಮನು ತಮ್ಮ ಮಾತನ್ನು ಕೇಳದೆ ಹೋದದ್ದನ್ನು ಇಸ್ರೇಲರು ನೋಡಿ ಅವನಿಗೆ, “ನಾವು ದಾವೀದನ ಕುಟುಂಬದ ಭಾಗವಾಗಿದ್ದೇವೋ? ಇಲ್ಲ. ನಮಗೆ ಇಷಯನ ಆಸ್ತಿಯಲ್ಲಿ ಪಾಲಿದೆಯೋ? ಇಲ್ಲ. ಆದ್ದರಿಂದ ಇಸ್ರೇಲರೇ, ನಾವು ನಮ್ಮನಮ್ಮ ಮನೆಗಳಿಗೆ ಹೋಗೋಣ. ದಾವೀದನ ಮಗನು ಅವನ ವಂಶದವರನ್ನೇ ಆಳಲಿ” ಎಂದು ಹೇಳಿ ಸೇರಿಬಂದವರನ್ನೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಮ್ಮ ಮಾತನ್ನು ಅರಸನು ಲಕ್ಷಿಸಲಿಲ್ಲ ಎಂದು ತಿಳಿದು, ಇಸ್ರಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ, ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿ,” ಎಂದು ಪ್ರತಿಭಟಿಸಿ ತಮ್ಮ ತಮ್ಮ ನಿವಾಸಗಳಿಗೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದು ತಿಳಿದು ಇಸ್ರಾಯೇಲ್ಯರೆಲ್ಲರೂ ಅವನಿಗೆ - ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ; ದಾವೀದನವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:16
34 ತಿಳಿವುಗಳ ಹೋಲಿಕೆ  

ಅಂದಿನಿಂದ ಇಂದಿನವರೆಗೆ ಇಸ್ರೇಲರು ದಾವೀದನ ಕುಟುಂಬಕ್ಕೆ ವಿರುದ್ಧವಾದರು.


ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.


“ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”


ದೇವರು ಎಲ್ಲಾ ಶತ್ರುಗಳನ್ನು ಕ್ರಿಸ್ತನಿಗೆ ಅಧೀನಗೊಳಿಸುವ ತನಕ ಕ್ರಿಸ್ತನು ಆಳಲೇಬೇಕು.


ದಾವೀದನು ಒಬ್ಬ ಪ್ರವಾದಿಯಾಗಿದ್ದನು ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು.


ಬಳಿಕ ಅವರೆಲ್ಲರೂ ತಮ್ಮತಮ್ಮ ಮನೆಗಳಿಗೆ ಹೊರಟುಹೋದರು.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತನ ಹಿಂಬಾಲಕರಲ್ಲಿ ಅನೇಕರು ಆತನನ್ನು ತೊರೆದುಬಿಟ್ಟರು. ಅವರು ಆತನನ್ನು ಹಿಂಬಾಲಿಸಲಿಲ್ಲ.


ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


“ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು. ಆ ಕೊಂಬೆಯು ಇಷಯನ ಬೇರಿನಿಂದ ಬೆಳೆಯುವುದು.


ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು.


ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.


ನನ್ನ ಮನೆಗೂ ನನ್ನ ರಾಜ್ಯಕ್ಕೂ ಅವನನ್ನು ನಿತ್ಯದ ರಾಜನನ್ನಾಗಿ ಮಾಡುವೆನು; ಅವನ ಆಳ್ವಿಕೆಯು ನಿರಂತರವಾಗಿರುವುದು.’”


ಆದರೂ ನಿನ್ನ ಮಗನಿಂದ ರಾಜ್ಯವನ್ನೆಲ್ಲ ನಾನು ಕಿತ್ತುಕೊಳ್ಳುವುದಿಲ್ಲ. ನಾನು ಅವನಿಗೆ ಒಂದು ಕುಲವನ್ನು ಆಳಲು ಬಿಡುತ್ತೇನೆ. ನಾನು ದಾವೀದನಿಗಾಗಿ ಹೀಗೆ ಮಾಡುತ್ತೇನೆ. ಅವನು ನನಗೆ ಒಬ್ಬ ಒಳ್ಳೆಯ ಸೇವಕನಾಗಿದ್ದನು. ನಾನು ಇದನ್ನು ಜೆರುಸಲೇಮಿನ ಏಳಿಗೆಗಾಗಿ ಮಾಡುತ್ತೇನೆ. ನಾನೇ ಆ ನಗರವನ್ನು ಆರಿಸಿಕೊಂಡೆನು” ಎಂದು ಹೇಳಿದನು.


ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.


ಒಬ್ಬನು ದಾವೀದನಿಗೆ ಸುದ್ದಿಯನ್ನು ಹೇಳಲು ಒಳಗೆ ಬಂದು, “ಇಸ್ರೇಲಿನ ಜನರು ಅಬ್ಷಾಲೋಮನನ್ನು ಹಿಂಬಾಲಿಸಲಾರಂಭಿಸಿದ್ದಾರೆ” ಎಂದು ಹೇಳಿದನು.


ಸೌಲನು ಅಹೀಮೆಲೆಕನಿಗೆ, “ನೀನು ಮತ್ತು ಇಷಯನ ಮಗ ನನ್ನ ವಿರುದ್ಧ ರಹಸ್ಯಯೋಜನಗೆಳನ್ನು ಏಕೆ ಮಾಡಿದಿರಿ? ನೀನು ದಾವೀದನಿಗೆ ರೊಟ್ಟಿಯನ್ನೂ ಖಡ್ಗವನ್ನೂ ಕೊಟ್ಟೆ! ನೀನು ಅವನಿಗಾಗಿ ದೇವರಲ್ಲಿ ಪ್ರಾರ್ಥಿಸಿದೆ. ಈಗ ದಾವೀದನು ನನ್ನ ಮೇಲೆ ಆಕ್ರಮಣಮಾಡಲು ಕಾಯುತ್ತಿದ್ದಾನೆ!” ಎಂದು ಹೇಳಿದನು.


ಸೌಲನ ಅಧಿಕಾರಿಗಳೊಂದಿಗೆ ಎದೋಮ್ಯನಾದ ದೋಯೇಗನು ನಿಂತಿದ್ದನು. ದೋಯೇಗನು, “ನಾನು ನೋಬಿನಲ್ಲಿ ಇಷಯನ ಮಗನನ್ನು ನೋಡಿದೆನು. ದಾವೀದನು ಅಹೀಟೂಬನ ಮಗನಾದ ಅಹೀಮೆಲೆಕನನ್ನು ನೋಡಲು ಬಂದಿದ್ದನು.


ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?


ಮಾರನೆಯ ದಿನದಲ್ಲಿ, ಅಂದರೆ ಆ ತಿಂಗಳ ಎರಡನೆಯ ದಿನದಲ್ಲಿ ದಾವೀದನ ಸ್ಥಳವು ಮತ್ತೆ ಖಾಲಿಯಾಗಿತ್ತು. ಆಗ ಸೌಲನು ತನ್ನ ಮಗನಾದ ಯೋನಾತಾನನಿಗೆ, “ನಿನ್ನೆ ಮತ್ತು ಇಂದು ಅಮಾವಾಸ್ಯೆ ಔತಣಕ್ಕೆ ಇಷಯನ ಮಗನಾದ ದಾವೀದನು ಏಕೆ ಬರಲಿಲ್ಲ?” ಎಂದು ಕೇಳಿದನು.


ಯೆರುಬ್ಬಾಳನು ಅನೇಕ ಸತ್ಕಾರ್ಯಗಳನ್ನು ಮಾಡಿದರೂ ಸಹ ಇಸ್ರೇಲರು ಅವನ ಕುಟುಂಬದವರಿಗೆ ಕೃತಜ್ಞತೆಯುಳ್ಳವರಾಗಿರಲಿಲ್ಲ.


ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.


ಆದರೆ ಇಸ್ರೇಲರಲ್ಲಿ ಕೆಲವರು ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಇವರಿಗೆ ರೆಹಬ್ಬಾಮನೇ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು