Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:4 - ಪರಿಶುದ್ದ ಬೈಬಲ್‌

4 “ರೆಹಬ್ಬಾಮನೇ, ನಿನ್ನ ತಂದೆಯು ನಮ್ಮ ಮೇಲೆ ತುಂಬ ಭಾರವಾದ ನೊಗವನ್ನು ಹೊರಿಸಿದ್ದನು. ಆ ಭಾರವನ್ನು ನೀನು ಕಡಿಮೆ ಮಾಡಬೇಕು. ಆಗ ನಾವು ನಿನ್ನ ಸೇವೆಮಾಡುವೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೊರೆಯನ್ನು ಹೊರಿಸಿದ್ದನು; ನಿನ್ನ ತಂದೆಯು ನೇಮಿಸಿದ ಬಿಟ್ಟಿ ಕೆಲಸವನ್ನು ನೀನು ಕಡಿಮೆ ಮಾಡಿ, ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ, ನಾವು ನಿನ್ನನ್ನು ಸೇವಿಸುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನಿಮ್ಮ ತಂದೆ ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದ್ದರು; ಅವರು ನೇಮಿಸಿದ್ದ ಬಿಟ್ಟೀ ಕೆಲಸವನ್ನು ನೀನು ಕಡಿಮೆಮಾಡಿ, ನಮ್ಮ ಮೇಲಿರುವ ಈ ಭಾರವಾದ ನೊಗವನ್ನು ಹಗುರಮಾಡುವುದಾದರೆ ನಾವು ನಿಮಗೆ ಸೇವೆಮಾಡುತ್ತೇವೆ,” ಎಂದನು. ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನಿಗೆ ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು; ನಿನ್ನ ತಂದೆಯು ನೇವಿುಸಿದ ಬಿಟ್ಟೀ ಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರಮಾಡುವದಾದರೆ ನಾವು ನಿನ್ನನ್ನು ಸೇವಿಸುವೆವು ಎಂದು ಹೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:4
15 ತಿಳಿವುಗಳ ಹೋಲಿಕೆ  

“ನಿನ್ನ ತಂದೆಯು ನಮ್ಮನ್ನು ಹೆಚ್ಚು ಕಷ್ಟದ ಕೆಲಸ ಮಾಡಲು ಬಲಾತ್ಕರಿಸಿದನು. ಈಗ ನೀನು ನಮಗೆ ಅದನ್ನು ಕಡಿಮೆಗೊಳಿಸು, ನಿನ್ನ ತಂದೆಯು ನಮ್ಮನ್ನು ಬಲಾತ್ಕರಿಸಿ ಮಾಡಿಸುತ್ತಿದ್ದ ಹೆಚ್ಚು ಕೆಲಸಗಳನ್ನು ನಿಲ್ಲಿಸು. ಆಗ ನಾವು ನಿನ್ನ ಸೇವೆಯನ್ನು ಮಾಡುವೆವು” ಎಂದು ಹೇಳಿದರು.


ದೇವರನ್ನು ಪ್ರೀತಿಸುವುದು ಎಂದರೆ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದು. ದೇವರ ಆಜ್ಞೆಗಳು ನಮಗೆ ಕಠಿಣವಾದವುಗಳಲ್ಲ.


ಅವರು ಬೇರೆಯವರಿಗೆ ಕಷ್ಟಕರವಾದ ನಿಯಮಗಳನ್ನು ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ಒತ್ತಾಯ ಮಾಡುತ್ತಾರೆ. ತಾವಾದರೋ ಆ ನಿಯಮಗಳಲ್ಲಿ ಯಾವದನ್ನಾದರೂ ಅನುಸರಿಸಲು ಪ್ರಯತ್ನಿಸುವುದಿಲ್ಲ.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಸೊಲೊಮೋನನು ಇಸ್ರೇಲರಾದ ಯಾರನ್ನೂ ತನ್ನ ಗುಲಾಮರಾಗಲು ಬಲಾತ್ಕರಿಸಲಿಲ್ಲ. ಇಸ್ರೇಲಿನ ಜನರು ಸೈನಿಕರಾಗಿದ್ದರು; ಸರ್ಕಾರದ ನೌಕರರಾಗಿದ್ದರು; ಅಧಿಕಾರಿಗಳಾಗಿದ್ದರು; ಸೇನಾಪತಿಗಳಾಗಿದ್ದರು; ರಥಾಶ್ವಗಳಿಗೂ ಅಶ್ವಪೇದೆಗೂ ಮಹಾ ಸೇನಾಧಿಪತಿಗಳಾಗಿದ್ದರು.


ಸೊಲೊಮೋನನು ಎಂಭತ್ತು ಸಾವಿರ ಜನರನ್ನು ಬಲಾತ್ಕಾರದಿಂದ ಬೆಟ್ಟಪ್ರದೇಶದಲ್ಲಿ ಕೆಲಸ ಮಾಡಲು ನೇಮಿಸಿದನು. ಈ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಎಪ್ಪತ್ತು ಸಾವಿರ ಜನರು ಕಲ್ಲುಗಳನ್ನು ಹೊರುತ್ತಿದ್ದರು.


ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್‌ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು.


ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.


ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.


ರಾಜನಾದ ಸೊಲೊಮೋನನು ಇಸ್ರೇಲಿನ ಮೂವತ್ತು ಸಾವಿರ ಜನರನ್ನು ಬಲತ್ಕಾರದಿಂದ ಈ ಕಾರ್ಯಕ್ಕೆ ನೇಮಿಸಿದನು.


ಇಸ್ರೇಲರು ಯಾರೊಬ್ಬಾಮನನ್ನು ತಮ್ಮ ಬಳಿಗೆ ಕರೆಯಿಸಿದರು. ಆಗ ಯಾರೊಬ್ಬಾಮನೂ ಇಸ್ರೇಲರೂ ರೆಹಬ್ಬಾಮನ ಬಳಿಗೆ ಹೋಗಿ,


ಅದಕ್ಕೆ ರೆಹಬ್ಬಾಮನು, “ನೀವು ಮೂರು ದಿನಗಳ ನಂತರ ನನ್ನ ಬಳಿಗೆ ಬನ್ನಿರಿ” ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು