2 ಪೂರ್ವಕಾಲ ವೃತ್ತಾಂತ 10:7 - ಪರಿಶುದ್ದ ಬೈಬಲ್7 ಹಿರಿಯರು ಅವನಿಗೆ, “ನೀನು ಅವರಿಗೆ ಕರುಣೆಯನ್ನು ತೋರಿ, ಅವರನ್ನು ಮೆಚ್ಚಿಸಿ, ಅವರಿಗೆ ಒಳ್ಳೆಯ ಮಾತುಗಳನ್ನಾಡಿದರೆ ಅವರು ನಿರಂತರವಾಗಿ ನಿನ್ನ ಸೇವೆಮಾಡುವರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು, “ನೀವು ಈ ಜನರಿಗೆ ದಯೆತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಅವನಿಗೆ - ನೀನು ಈ ಜನರಿಗೆ ದಯತೋರಿಸಿ ಅವರನ್ನು ಮೆಚ್ಚಿಸುವ ಒಳ್ಳೇ ಉತ್ತರ ಕೊಡುವದಾದರೆ ಅವರು ಯಾವಾಗಲೂ ನಿನಗೆ ಒಳಗಾಗಿರುವರು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಅವನಿಗೆ, “ನೀನು ಈ ಜನರಿಗೆ ದಯವುಳ್ಳವನಾಗಿ ಅವರನ್ನು ಮೆಚ್ಚಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |