Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:1 - ಪರಿಶುದ್ದ ಬೈಬಲ್‌

1 ರೆಹಬ್ಬಾಮನು ಜೆರುಸಲೇಮಿಗೆ ಬಂದು ಯೆಹೂದ ಮತ್ತು ಬೆನ್ಯಾಮೀನ್ ಕುಲದ ಒಂದು ಲಕ್ಷ ಎಂಭತ್ತುಸಾವಿರ ಮಂದಿ ನುರಿತ ಸೈನಿಕರನ್ನು ಒಟ್ಟು ಸೇರಿಸಿದನು. ಇಸ್ರೇಲರೊಂದಿಗೆ ಯುದ್ಧಮಾಡಿ ಅವರ ರಾಜ್ಯವನ್ನು ಮತ್ತೆ ಪಡೆದುಕೊಳ್ಳಬೇಕೆಂಬುದೇ ಅವನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದ ನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ಅವರ ರಾಜ್ಯವನ್ನು ಮರಳಿ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಟ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರೆಹಬ್ಬಾಮನು ಯೆರೂಸಲೇಮನ್ನು ಮುಟ್ಟಿದ ನಂತರ ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೂ ರಾಜ್ಯವನ್ನು ತಿರಿಗಿ ತನ್ನ ವಶಪಡಿಸಿಕೊಳ್ಳುವದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು, ಯೆಹೂದ ಮತ್ತು ಬೆನ್ಯಾಮೀನವರ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:1
6 ತಿಳಿವುಗಳ ಹೋಲಿಕೆ  

ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.


ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.


ನನ್ನ ಯೌವನಸ್ಥರು ತಿಂದ ಆಹಾರದ ಹೊರತು ಬೇರೆ ಯಾವುದನ್ನೂ ನಾನು ಸ್ವೀಕರಿಸುವುದಿಲ್ಲ. ಆದರೆ ಬೇರೆ ಜನರಿಗೆ ಅವರ ಪಾಲನ್ನು ಕೊಡು. ನಾವು ಯುದ್ಧದಲ್ಲಿ ಗೆದ್ದುತಂದ ವಸ್ತುಗಳನ್ನು ತೆಗೆದುಕೊ; ಆನೇರ್, ಎಷ್ಕೋಲ ಮತ್ತು ಮಮ್ರೆಯರಿಗೆ ಅವರ ಪಾಲನ್ನು ಕೊಡು. ಈ ಜನರು ಯುದ್ಧದಲ್ಲಿ ನನಗೆ ಸಹಾಯ ಮಾಡಿದರು” ಎಂದು ಹೇಳಿದನು.


ಸೊಲೊಮೋನನಿಂದ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇನ್ನೂ ಈಜಿಪ್ಟಿನಲ್ಲಿಯೇ ಇದ್ದನು. ಸೊಲೊಮೋನನು ಸತ್ತುಹೋದ ಸುದ್ದಿಯನ್ನು ಕೇಳಿ ಅವನು ಎಫ್ರಾಯೀಮ್ ಬೆಟ್ಟದಲ್ಲಿರುವ ಜೆರೆಧ ಎಂಬ ಪಟ್ಟಣಕ್ಕೆ ಹಿಂದಿರುಗಿದನು. ರಾಜನಾದ ಸೊಲೊಮೋನನು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗನಾದ ರೆಹಬ್ಬಾಮನು ಹೊಸ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು