2 ಪೂರ್ವಕಾಲ ವೃತ್ತಾಂತ 11:16 - ಪರಿಶುದ್ದ ಬೈಬಲ್16 ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇಸ್ರಯೇಲರ ಎಲ್ಲ ಕುಲಗಳಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಜೆರುಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಸ್ರಾಯೇಲ್ಯರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ದರ್ಶನವನ್ನು ಬಯಸುವವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ಯಜ್ಞವರ್ಪಿಸುವದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇವಿುಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
“‘ನಿಮ್ಮ ಪ್ರದೇಶವು ದೇವಾರಾಧನೆ ಮಾಡಲು ಅಶುದ್ಧವಾಗಿದ್ದರೆ ನಮ್ಮ ಪ್ರದೇಶಕ್ಕೆ ಬಂದುಬಿಡಿ. ಯೆಹೋವನ ಗುಡಾರವು ನಮ್ಮ ಪ್ರದೇಶದಲ್ಲಿದೆ. ನೀವು ನಮ್ಮ ಸ್ವಲ್ಪ ಭೂಮಿಯನ್ನು ತೆಗೆದುಕೊಂಡು ಅಲ್ಲಿ ವಾಸವಾಗಿರಬಹುದು. ಆದರೆ ಯೆಹೋವನಿಗೆ ವಿರುದ್ಧವಾಗಿ ಹೋಗಬೇಡಿ. ಬೇರೊಂದು ಯಜ್ಞವೇದಿಕೆಯನ್ನು ಕಟ್ಟಬೇಡಿ. ದೇವದರ್ಶನಗುಡಾರದಲ್ಲಿ ನಾವು ಈಗಾಗಲೇ ಯೆಹೋವನಾದ ನಮ್ಮ ದೇವರ ಯಜ್ಞವೇದಿಕೆಯನ್ನು ಹೊಂದಿದ್ದೇವೆ.