2 ಪೂರ್ವಕಾಲ ವೃತ್ತಾಂತ 11:17 - ಪರಿಶುದ್ದ ಬೈಬಲ್17 ಅವರೆಲ್ಲ ಯೆಹೂದ ರಾಜ್ಯವನ್ನು ಬಲಗೊಳಿಸಿದರು ಮತ್ತು ಸೊಲೊಮೋನನ ಮಗನಾದ ರೆಹಬ್ಬಾಮನೊಂದಿಗೆ ಮೂರು ವರ್ಷವಿದ್ದರು. ಯಾಕೆಂದರೆ ಅವರು ಈ ವರ್ಷಗಳಲ್ಲಿ ದಾವೀದನಂತೆ ಮತ್ತು ಸೊಲೊಮೋನನಂತೆ ದೇವರ ಮಾರ್ಗದಲ್ಲಿ ನಡೆಯುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ ಅಭಿವೃದ್ಧಿಯಾಗಿ, ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇವರೆಲ್ಲರು ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗೂ ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಎಂದೇ ಜುದೇಯರಾಜ್ಯವು ಆ ವರ್ಷಗಳಲ್ಲಿ ವೃದ್ಧಿಯಾಗಿ, ಸೊಲೊಮೋನನ ಮಗ ರೆಹಬ್ಬಾಮನು ಬಲಿಷ್ಠನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇವರೆಲ್ಲರೂ ಮೊದಲನೆಯ ಮೂರು ವರುಷಗಳಲ್ಲಿ ದಾವೀದಸೊಲೊಮೋನರ ಮಾರ್ಗದಲ್ಲಿ ನಡೆಯುತ್ತಿದ್ದದರಿಂದ ಯೆಹೂದರಾಜ್ಯವು ಆ ವರುಷಗಳಲ್ಲಿ ವೃದ್ಧಿಯಾಗಿ ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೀಗೆ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ, ಸೊಲೊಮೋನನ ಮಗ ರೆಹಬ್ಬಾಮನನ್ನು ಮೂರು ವರ್ಷಗಳವರೆಗೂ ಬಲಪಡಿಸಿದರು. ಅವರು ಮೂರು ವರ್ಷಗಳವರೆಗೂ ದಾವೀದನ, ಸೊಲೊಮೋನನ ಮಾರ್ಗದಲ್ಲಿ ನಡೆದರು. ಅಧ್ಯಾಯವನ್ನು ನೋಡಿ |