2 ಪೂರ್ವಕಾಲ ವೃತ್ತಾಂತ 11:18 - ಪರಿಶುದ್ದ ಬೈಬಲ್18 ರೆಹಬ್ಬಾಮನು ಯೆರೀಮೋತನ ಮಗಳಾದ ಮಹ್ಲತ್ ಎಂಬಾಕೆಯನ್ನು ಮದುವೆಯಾದನು. ಆಕೆಯ ತಾಯಿಯ ಹೆಸರು ಅಬೀಹೈಲ್. ಯೆರೀಮೋತನು ದಾವೀದನ ಮಗನಾಗಿದ್ದನು. ಅಬೀಹೈಲಳು ಇಷಯನ ಮಗನಾದ ಎಲೀಯಾಬನ ಮಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನ ಮಗಳಾದ ಮಹ್ಲತ್ತಳನ್ನು, ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳನ್ನೂ ಹೆಂಡತಿಯನ್ನಾಗಿ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರೆಹಬ್ಬಾಮನು, ದಾವೀದನ ಮಗ ಯೆರೀಮೋತನಿಗೆ ಜೆಸ್ಸೆಯ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ರೆಹಬ್ಬಾಮನು ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು. ಈ ಮಹಲತ್ ದಾವೀದನ ಮಗ ಯೆರೀಮೋತ್ ಹಾಗು ಅಬೀಹೈಲರ ಮಗಳು. ಈ ಅಬೀಹೈಲಳು ಇಷಯನ ಮೊಮ್ಮಗಳೂ, ಎಲೀಯಾಬನ ಮಗಳೂ ಆಗಿದ್ದಳು. ಅಧ್ಯಾಯವನ್ನು ನೋಡಿ |
ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.