Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:23 - ಪರಿಶುದ್ದ ಬೈಬಲ್‌

23 ರೆಹಬ್ಬಾಮನು ವಿವೇಕದಿಂದ ತನ್ನ ಗಂಡುಮಕ್ಕಳನ್ನು ಯೆಹೂದ ಮತ್ತು ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಗಳುಳ್ಳ ಪಟ್ಟಣಗಳಲ್ಲಿರಿಸಿ ಅವರಿಗೆ ಬೇಕಾದಷ್ಟು ಆಹಾರವನ್ನು ಸರಬರಾಜು ಮಾಡಿಸಿದನು. ಅವರಿಗೆ ಅನೇಕ ಸ್ತ್ರೀಯರನ್ನು ಹೆಂಡತಿಯರನ್ನಾಗಿ ಒದಗಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತನ್ನ ಉಳಿದ ಎಲ್ಲ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ-ಬೆನ್ಯಾಮೀನ್ ಕುಲಪ್ರದೇಶಗಳಲ್ಲಿ ಇದ್ದ ಕೋಟೆ ಕೊತ್ತಲುಗಳಿಂದ ಕೂಡಿದ ಆಯಾ ಪಟ್ಟಣಗಳಲ್ಲಿಟ್ಟು, ಅವರಿಗೆ ಬೇಕಾದಷ್ಟು ಜೀವನಾಂಶವನ್ನು ಏರ್ಪಡಿಸಿ, ಹಲವಾರು ಹೆಂಡತಿಯರನ್ನೂ ಗೊತ್ತುಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿಟ್ಟು ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ಅವನು ವಿವೇಕವಾಗಿ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾಮೀನಿನ ದೇಶಗಳಲ್ಲಿ ಇರುವ ಎಲ್ಲಾ ಬಲವಾದ ಪಟ್ಟಣಗಳಲ್ಲಿ ಚದರಿಸಿ, ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಅವರಿಗೆ ಅನೇಕ ಹೆಂಡತಿಯರನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:23
8 ತಿಳಿವುಗಳ ಹೋಲಿಕೆ  

“ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ‘ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.


ಯೆಹೋಷಾಫಾಟನು ತನ್ನ ಮಕ್ಕಳಿಗೆ ಅನೇಕ ಬೆಳ್ಳಿಬಂಗಾರದ ಮತ್ತು ಬೆಲೆಬಾಳುವ ವಸ್ತುಗಳನ್ನು ಉಡುಗೊರೆಯಾಗಿ ಕೊಟ್ಟನು. ಮಾತ್ರವಲ್ಲದೆ ಕೋಟೆಯಿಂದ ಭದ್ರಪಡಿಸಲ್ಪಟ್ಟ ಪಟ್ಟಣಗಳನ್ನು ಕೊಟ್ಟನು. ಆದರೆ ಯೆಹೂದ ರಾಜ್ಯವನ್ನು ತನ್ನ ಚೊಚ್ಚಲ ಮಗನಾದ ಯೆಹೋರಾಮನಿಗೆ ಕೊಟ್ಟನು.


ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಯುದ್ಧದಲ್ಲಿ ರಕ್ಷಿಸಿಕೊಳ್ಳಲು ಅವನು ಯೆಹೂದದಲ್ಲಿ ಭದ್ರವಾದ ಪಟ್ಟಣಗಳನ್ನು ಕಟ್ಟಿದನು.


ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರೊಳಗಿಂದ ನಾಯಕನನ್ನಾಗಿ ಆರಿಸಿದನು. ರೆಹಬ್ಬಾಮನು ಅವನನ್ನು ಅರಸನನ್ನಾಗಿ ಮಾಡಬೇಕೆಂಬುದೇ ಅವನ ಉದ್ದೇಶವಾಗಿತ್ತು.


ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು