2 ಪೂರ್ವಕಾಲ ವೃತ್ತಾಂತ 11:4 - ಪರಿಶುದ್ದ ಬೈಬಲ್4 ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಸಹೋದರರೊಂದಿಗೆ ನೀವು ಯುದ್ಧಮಾಡಬಾರದು. ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಲಿ. ಯಾಕೆಂದರೆ ಇದನ್ನು ನಾನೇ ಮಾಡಿದ್ದೇನೆ.” ರೆಹಬ್ಬಾಮನೂ ಅವನೊಂದಿಗಿದ್ದ ಸೈನಿಕರೂ ಯೆಹೋವನ ಸಂದೇಶವನ್ನು ಕೇಳಿ ಹಿಂತಿರುಗಿದರು. ಅವರು ಯಾರೊಬ್ಬಾಮನೊಂದಿಗೆ ಯುದ್ಧಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು’” ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ‘ಸರ್ವೇಶ್ವರ ಇಂತೆನ್ನುತ್ತಾರೆ: ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರು ಹಿಂದಿರುಗಿಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ’ ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಇಂತೆನ್ನುತ್ತಾನೆ, ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು. ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ‘ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ. ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯಾರೊಬ್ಬಾಮನ ಮೇಲೆ ಹೋಗದೆ ಹಿಂದಿರುಗಿ ಹೋದರು. ಅಧ್ಯಾಯವನ್ನು ನೋಡಿ |