2 ಪೂರ್ವಕಾಲ ವೃತ್ತಾಂತ 12:14 - ಪರಿಶುದ್ದ ಬೈಬಲ್14 ರೆಹಬ್ಬಾಮನು ಯೆಹೋವನನ್ನು ಅನುಸರಿಸದೆ ಅವಿಧೇಯನಾಗಿ ಕೆಟ್ಟಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವನು ಸರ್ವೇಶ್ವರನಿಗೆ ವಿಧೇಯನಾಗಿ ನಡೆಯಲು ಮನಸ್ಸುಮಾಡದೆ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನು ಯೆಹೋವನನ್ನು ಅನುಸರಿಸುವದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು ಯೆಹೋವ ದೇವರನ್ನು ಹುಡುಕಲು ತನ್ನ ಹೃದಯವನ್ನು ಸ್ಥಿರಪಡಿಸದೆ ಇದ್ದುದರಿಂದ, ಕೆಟ್ಟದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.