2 ಪೂರ್ವಕಾಲ ವೃತ್ತಾಂತ 12:15 - ಪರಿಶುದ್ದ ಬೈಬಲ್15 ಪ್ರವಾದಿಯಾದ ಶೆಮಾಯ ಮತ್ತು ದರ್ಶಿಯಾದ ಇದ್ದೋ ಬರೆದ ಚರಿತ್ರೆಗಳ ವಂಶಾವಳಿಗಳಲ್ಲಿ ರೆಹಬ್ಬಾಮನು ತಾನು ರಾಜನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಬರೆಯಲ್ಪಟ್ಟಿವೆ. ಅವನ ಆಳ್ವಿಕೆಯ ಕಾಲದಲ್ಲೆಲ್ಲಾ ಅವನಿಗೂ ಯಾರೊಬ್ಬಾಮನಿಗೂ ಯುದ್ಧಗಳು ನಡೆಯುತ್ತಲೇ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ ಹಾಗೂ ದರ್ಶಿಯಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ರೆಹಬ್ಬಾಮನ ಪೂರ್ವೋತ್ತರಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಿಯಾದ ಇದ್ದೋ ಎಂಬವರ ಚರಿತ್ರೆಗಳ ವಂಶಾವಳಿಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ರೆಹಬ್ಬಾಮನು ಅರಸನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ, ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋವನ ಪುಸ್ತಕದಲ್ಲಿಯೂ ಬರೆದಿರುತ್ತವೆ. ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು. ಅಧ್ಯಾಯವನ್ನು ನೋಡಿ |
ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.