2 ಪೂರ್ವಕಾಲ ವೃತ್ತಾಂತ 12:2 - ಪರಿಶುದ್ದ ಬೈಬಲ್2 ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಶೀಶಕನು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ಶೀಶಕನು ಈಜಿಪ್ಟಿನ ರಾಜ. ರೆಹಬ್ಬಾಮನೂ ಯೆಹೂದ ಪ್ರಾಂತ್ಯದ ಜನರೂ ಯೆಹೋವನಿಗೆ ಅವಿಧೇಯರಾದದ್ದೇ ಈ ಮುತ್ತಿಗೆಗೆ ಕಾರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರನಿಗೆ ದ್ರೋಹಿಗಳಾದರು. ಅರಸ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರು ಯೆಹೋವನಿಗೆ ದ್ರೋಹಿಗಳಾದದರಿಂದ ಅರಸನಾದ ರೆಹಬ್ಬಾಮನ ಆಳಿಕೆಯ ಐದನೆಯ ವರುಷದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಯೆಹೋವ ದೇವರಿಗೆ ವಿಶ್ವಾಸದ್ರೋಹಮಾಡಿದ್ದರಿಂದ, ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು. ಅಧ್ಯಾಯವನ್ನು ನೋಡಿ |
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.
ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.