Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:6 - ಪರಿಶುದ್ದ ಬೈಬಲ್‌

6 ಆಗ ಯೆಹೂದ ಪ್ರಾಂತ್ಯದ ನಾಯಕರುಗಳೂ ರೆಹಬ್ಬಾಮನೂ ತಾವು ಮಾಡಿದ ತಪ್ಪಿಗೆ ಪಶ್ಚಾತ್ತಾಪಪಟ್ಟು ತಮ್ಮನ್ನು ದೇವರ ಮುಂದೆ ತಗ್ಗಿಸಿಕೊಂಡರು. “ಯೆಹೋವನು ನೀತಿವಂತನೇ ಸರಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅರಸನೂ ಮತ್ತು ಇಸ್ರಾಯೇಲರ ನಾಯಕರೂ ಯೆಹೋವನು ನೀತಿವಂತನೆಂದು ಒಪ್ಪಿ ತಮ್ಮನ್ನು ತಾವೇ ತಗ್ಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅರಸನೂ ಇಸ್ರಯೇಲ್ ಪ್ರಧಾನರೂ, ಸರ್ವೇಶ್ವರಸ್ವಾಮಿ ನ್ಯಾಯವಂತರೆಂದು ಒಪ್ಪಿಕೊಂಡು ತಮ್ಮನ್ನೇ ತಗ್ಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಅರಸನೂ ಇಸ್ರಾಯೇಲ್ ಪ್ರಧಾನರೂ ಯೆಹೋವನು ನ್ಯಾಯವಂತನೆಂದು ಒಪ್ಪಿ ತಮ್ಮನ್ನು ತಗ್ಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಇಸ್ರಾಯೇಲಿನ ಪ್ರಧಾನರೂ, ಅರಸನೂ ತಮ್ಮನ್ನು ತಗ್ಗಿಸಿಕೊಂಡು, “ಯೆಹೋವ ದೇವರು ನೀತಿವಂತರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:6
25 ತಿಳಿವುಗಳ ಹೋಲಿಕೆ  

ಫರೋಹನು ಮೋಶೆ ಆರೋನರನ್ನು ಕರೆಸಿ ಅವರಿಗೆ, “ಈ ಸಾರಿ ನಾನು ಪಾಪಮಾಡಿದ್ದೇನೆ. ಯೆಹೋವನೇ ನೀತಿವಂತನು. ನಾನೂ ನನ್ನ ಜನರೂ ದೋಷಿಗಳಾಗಿದ್ದೇವೆ.


ಯೆಹೋವನಾದ ನೀನು ನಮಗೆ ಆಪತ್ತುಗಳನ್ನು ಸಿದ್ಧಪಡಿಸಿಟ್ಟಿದ್ದೆ. ಆ ಆಪತ್ತುಗಳು ನಮ್ಮ ಮೇಲೆ ಬರುವಂತೆ ನೀನು ಮಾಡಿದೆ. ಯೆಹೋವನಾದ ನೀನು ಎಲ್ಲವನ್ನು ನಿಷ್ಪಕ್ಷಪಾತವಾಗಿ ಮಾಡುವೆ. ಆದ್ದರಿಂದಲೇ ಇದೆಲ್ಲವನ್ನು ಮಾಡಿದೆ. ಆದರೆ ಇಂದಿಗೂ ನಾವು ನಿನ್ನ ಉಪದೇಶಕ್ಕೆ ಕಿವಿಗೊಟ್ಟಿಲ್ಲ.


ಪ್ರಭುವಿನ ಎದುರಿನಲ್ಲಿ ದೀನರಾಗಿರಿ, ಆತನು ನಿಮ್ಮನ್ನು ಉನ್ನತ ಮಟ್ಟಕ್ಕೆ ತರುತ್ತಾನೆ.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.


ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


“ಬೇಲ್ಶಚ್ಚರನೇ, ಇವುಗಳೆಲ್ಲ ನಿನಗೆ ತಿಳಿದೇ ಇವೆ. ನೀನು ನೆಬೂಕದ್ನೆಚ್ಚರನ ಮಗ. ಆದರೂ ನೀನು ನಮ್ರತೆಯಿಂದ ವರ್ತಿಸಲಿಲ್ಲ.


ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.


ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”


ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.


ಕೇಳಿರಿ, ಗಮನ ಕೊಡಿರಿ; ದೇವರು ನಿಮಗೆ ಹೇಳಿದ್ದಾನೆ. ಗರ್ವಪಡಬೇಡಿರಿ.


ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು.


ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!


ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಂತೆ ಅಮೋನನು ತಗ್ಗಿಸಿಕೊಳ್ಳಲಿಲ್ಲ. ಅಮೋನನು ಹೆಚ್ಚೆಚ್ಚಾಗಿ ಪಾಪಗಳನ್ನು ಮಾಡಿದನು.


ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.


ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು.


ಆಗ ಹಿಜ್ಕೀಯನೂ ಜೆರುಸಲೇಮಿನ ನಿವಾಸಿಗಳೂ ತಮ್ಮ ಹೃದಯವನ್ನು ಪರಿವರ್ತಿಸಿಕೊಂಡರು; ತಮ್ಮನ್ನು ಬಹಳವಾಗಿ ತಗ್ಗಿಸಿಕೊಂಡು ಗರ್ವಪಡುವದನ್ನು ನಿಲ್ಲಿಸಿದರು. ಆದ್ದರಿಂದ ಹಿಜ್ಕೀಯನು ಇದ್ದಷ್ಟು ಕಾಲ ಯೆಹೋವನ ಕೋಪ ಅವರ ಮೇಲೆ ಬರಲಿಲ್ಲ.


ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


ರೆಹಬ್ಬಾಮನು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಮೇಲಿದ್ದ ದೇವರ ಕೋಪವು ಶಾಂತವಾಯಿತು. ಹೀಗೆ ಯೆಹೋವನು ಅವನನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಯಾಕೆಂದರೆ ಯೆಹೂದದಲ್ಲಿ ಇನ್ನೂ ಕೆಲವು ನೀತಿವಂತರಿದ್ದರು.


ಯೆಹೋರಾಮನ ತಮ್ಮಂದಿರು ಯಾರೆಂದರೆ: ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್ ಮತ್ತು ಶೆಫಟ್ಯ. ಇವರೆಲ್ಲಾ ಯೆಹೂದದ ರಾಜನಾಗಿದ್ದ ಯೆಹೋಷಾಫಾಟನ ಮಕ್ಕಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು