11 ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
11 ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
11 ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.
11 ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
11 ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.
ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.
ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.
ಈ ಭೂಮಿಯು ಚಾದೋಕನ ಸಂತತಿಯವರಿಗಿರುವದು. ಆ ಜನರು ನನ್ನ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನ್ನನ್ನು ಬಿಟ್ಟು ತೊಲಗಿದರೂ ಇವರು ನನಗೆ ಸೇವೆಮಾಡುವದನ್ನು ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನ್ನನ್ನು ಬಿಟ್ಟುಹೋಗಲಿಲ್ಲ.
“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.
ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.
“ನಮಗಾದರೋ ಯೆಹೋವನೇ ದೇವರು. ಯೆಹೂದ್ಯ ಪ್ರಾಂತ್ಯದವರಾದ ನಾವು ದೇವರ ಕಟ್ಟಳೆಗೆ ವಿಧೇಯರಾಗಲು ನಿರಾಕರಿಸಲಿಲ್ಲ. ನಾವು ಆತನನ್ನು ತೊರೆಯಲಿಲ್ಲ. ಆತನ ಸೇವೆಮಾಡಲು ಲೇವಿಯರು ಮತ್ತು ಆರೋನನ ಸಂತತಿಯವರಾದ ಯಾಜಕರು ಸಹಾಯ ಮಾಡುವರು.
ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”
ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.