2 ಪೂರ್ವಕಾಲ ವೃತ್ತಾಂತ 13:12 - ಪರಿಶುದ್ದ ಬೈಬಲ್12 ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಜನರೊಂದಿಗೆ ಕಾದಾಡಬೇಡಿರಿ. ನೀವು ಜಯಹೊಂದುವದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿರುತ್ತಾನೆ; ನಿಮಗೆ ವಿರೋಧವಾಗಿ ಆರ್ಭಟದಿಂದ ಊದತಕ್ಕ ತುತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿರುತ್ತಾರೆ. ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಸಫಲರಾಗಲಿಕ್ಕಿಲ್ಲ ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
ನೀನು ಹೀಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ದ್ರಾಕ್ಷಾಲತೆಯು ಬದುಕಿ ಬೆಳೆಯುವುದೋ? ಇಲ್ಲ. ಮೊದಲನೆ ಹದ್ದು ದ್ರಾಕ್ಷಾಲತೆಗಳ ಬೇರುಗಳನ್ನು ಎಳೆದುಹಾಕಿ, ಅದರ ದ್ರಾಕ್ಷಿಹಣ್ಣುಗಳನ್ನು ಕಿತ್ತುಹಾಕುವುದು. ಆಗ ಚಿಗುರುಗಳು ಬಾಡಿ ಒಣಗಿಹೋಗುವವು. ಆ ಸಸಿಯು ಬಲಹೀನವಾಗುವುದು. ಆಗ ಅದನ್ನು ಬೇರುಸಹಿತ ಕಿತ್ತುಹಾಕಲು ಮಹಾ ಬಲವಾಗಲಿ ಅಥವಾ ದೊಡ್ಡಸೈನ್ಯವಾಗಲಿ ಅಗತ್ಯವಿರುವದಿಲ್ಲ.
“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.