Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:13 - ಪರಿಶುದ್ದ ಬೈಬಲ್‌

13 ಆದರೆ ಯಾರೊಬ್ಬಾಮನು ತನ್ನ ಸೈನ್ಯದ ಒಂದು ಭಾಗವನ್ನು ಅಬೀಯನ ಸೈನ್ಯದ ಹಿಂಭಾಗಕ್ಕೆ ಅವನಿಗೆ ಗೊತ್ತಿಲ್ಲದಂತೆ ಕಳುಹಿಸಿದನು. ಯಾರೊಬ್ಬಾಮನ ಸೈನ್ಯವು ಅಬೀಯನ ಸೈನ್ಯಕ್ಕೆ ಎದುರಾಗಿತ್ತು. ಅಬೀಯನ ಹಿಂದೆ ಯಾರೊಬ್ಬಾಮನ ಸೈನ್ಯವು ಅಡಗಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚುಹಾಕುವುದಕ್ಕಾಗಿ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಶತ್ರುಸೈನ್ಯ ಯೆಹೂದ್ಯರ ಮುಂದೆಯೂ ಹೊಂಚುಹಾಕುವವರು ಅವರ ಹಿಂದೆಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚುಹಾಕುವದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವವರು ಅವರ ಹಿಂದೆಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆ ಬರಮಾಡಿದನು. ಆದ್ದರಿಂದ ಇಸ್ರಾಯೇಲರು ಯೆಹೂದದವರ ಮುಂದೆಯೂ, ಅವರ ಹಿಂದೆಯೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:13
6 ತಿಳಿವುಗಳ ಹೋಲಿಕೆ  

ಬಳಿಕ ಯೆಹೋಶುವನು ಅವರನ್ನು ಅವರು ಅಡಗಿಕೊಳ್ಳಬೇಕಾದ ಸ್ಥಳಕ್ಕೆ ಕಳುಹಿಸಿದನು. ಅವರು “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿದ್ದ ಒಂದು ಸ್ಥಳಕ್ಕೆ ಹೋದರು. ಇದು ಆಯಿಯ ಪಶ್ಚಿಮಕ್ಕಿತ್ತು. ಯೆಹೋಶುವನು ತನ್ನ ಜನರೊಂದಿಗೆ ಆ ರಾತ್ರಿ ಅಲ್ಲಿಯೇ ಇದ್ದನು.


ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ.


ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಅವರು ಹೀಗೆ ಸ್ತೋತ್ರ ಮಾಡುತ್ತಿರುವಾಗ ಅಮ್ಮೋನಿಯರ ಮೇಲೆಯೂ ಮೋವಾಬ್ಯರ ಮೇಲೆಯೂ ಸೇಯೀರ್ ಬೆಟ್ಟಪ್ರದೇಶದವರ ಮೇಲೆಯೂ ಇತರ ವೈರಿಗಳು ಹಠಾತ್ತನೆ ದಾಳಿ ಮಾಡುವಂತೆ ಯೆಹೋವನು ಮಾಡಿದನು. ಯೆಹೂದವನ್ನು ಆಕ್ರಮಣಮಾಡಲು ಬಂದಿದ್ದ ಅವರೆಲ್ಲರೂ ಸೋತುಹೋದರು.


ನೆಬಾಟನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿದ್ದನು. ಯಾರೊಬ್ಬಾಮನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಹೊಸ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು