ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.
“ಆಯಿ”ಯ ಜನರು ಹಿಂತಿರುಗಿ ನೋಡಿದಾಗ ತಮ್ಮ ಪಟ್ಟಣ ಉರಿಯುತ್ತಿರುವುದನ್ನೂ ಹೊಗೆಯು ಆಕಾಶಕ್ಕೆ ಏರುತ್ತಿರುವುದನ್ನೂ ಕಂಡು ತಮ್ಮ ಶಕ್ತಿಯನ್ನೂ ಧೈರ್ಯವನ್ನೂ ಕಳೆದುಕೊಂಡರು. ಅವರು ಇಸ್ರೇಲಿನ ಜನರ ಬೆನ್ನಟ್ಟುವುದನ್ನು ಬಿಟ್ಟರು. ಇಸ್ರೇಲಿನ ಜನರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ”ಯ ಜನರೊಂದಿಗೆ ಹೋರಾಡತೊಡಗಿದರು. “ಆಯಿ”ಯ ಜನರಿಗೆ ಓಡಿಹೋಗಲು ಸುರಕ್ಷಿತವಾದ ಯಾವ ಸ್ಥಳವೂ ಇರಲಿಲ್ಲ.
ರಥಾಧಿಪತಿಗಳು ಯೆಹೋಷಾಫಾಟನನ್ನು ನೋಡಿದಾಗ ಅವನೇ ಅಹಾಬನೆಂದೆಣಿಸಿ ಅವನ ಮೇಲೆ ದಾಳಿ ನಡೆಸಿದರು. ಆದರೆ ಯೆಹೋಷಾಫಾಟನು ಗಟ್ಟಿಯಾಗಿ ಕೂಗಿಕೊಂಡನು. ಆಗ ಯೆಹೋವನು ಅವನಿಗೆ ಸಹಾಯಮಾಡಿ ರಥಾಧಿಪತಿಗಳು ಅವನಿಂದ ಬೇರೆ ಕಡೆಗೆ ತಿರುಗುವಂತೆ ಮಾಡಿದನು.
“ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.
ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.