Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:17 - ಪರಿಶುದ್ದ ಬೈಬಲ್‌

17 ಅಬೀಯನ ಸೈನ್ಯವು ಇಸ್ರೇಲಿನ ಸೈನ್ಯದ ಮೇಲೆ ಮಹಾಜಯವನ್ನು ಗಳಿಸಿತು. ಯಾರೊಬ್ಬಾಮನ ಐದು ಲಕ್ಷ ಪಳಗಿದ ಸೈನಿಕರು ಕೊಲ್ಲಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಬೀಯನೂ ಅವನ ಜನರೂ ಅವರಲ್ಲಿ ಅನೇಕಾನೇಕರನ್ನು ಸದೆಬಡಿದರು. ಇಸ್ರಯೇಲ್ ಯೋಧರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಬೀಯನೂ ಅವನ ಜನರೂ ಅವರಲ್ಲಿ ಅನೇಕಾನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲ್ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಬೀಯನೂ, ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿದರು. ಇಸ್ರಾಯೇಲರಲ್ಲಿ ಐದು ಲಕ್ಷಮಂದಿ ಬಲಶಾಲಿಗಳಾದ ಸೈನಿಕರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:17
9 ತಿಳಿವುಗಳ ಹೋಲಿಕೆ  

ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.


ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಜನರೊಂದಿಗೆ ಕಾದಾಡಬೇಡಿರಿ. ನೀವು ಜಯಹೊಂದುವದಿಲ್ಲ” ಎಂದು ಹೇಳಿದನು.


ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀಯನ ಮೇಲೆ ಯುದ್ಧಕ್ಕೆ ತಯಾರಾದನು.


ಯೆಹೂದದ ಸೈನ್ಯದ ಮುಂದೆ ಇಸ್ರೇಲರ ಸೈನ್ಯವು ಬೆನ್ನುಕೊಟ್ಟು ಓಡಿಹೋಗುವಂತೆ ದೇವರು ಮಾಡಿದನು.


ಇಸ್ರೇಲಿನ ಜನರು ಸೋತುಹೋದರು. ಯೆಹೂದದ ಜನರಿಗೆ ಜಯ ದೊರಕಿತು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಭರವಸವನ್ನಿಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು