ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.
ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.
ಅಬೀಯನ ಸೈನಿಕರು ಯಾರೊಬ್ಬಾಮನ ಸೈನಿಕರನ್ನು ಓಡಿಸಿದರು. ಮತ್ತು ಅವರ ಪಟ್ಟಣಗಳಾದ ಬೇತೇಲ್, ಯೆಷಾನಾ ಮತ್ತು ಎಪ್ರೋನ್‌ಗಳನ್ನು ವಶಪಡಿಸಿಕೊಂಡರು. ಈ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿದ್ದ ಹಳ್ಳಿಗಳನ್ನೂ ವಶಪಡಿಸಿಕೊಂಡರು.