Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:2 - ಪರಿಶುದ್ದ ಬೈಬಲ್‌

2 ಅವನು ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಊರೀಯೇಲನ ಮಗಳಾದ ಮೀಕಾಯಳು ಅಬೀಯನ ತಾಯಿ. ಊರೀಯೇಲನು ಗಿಬೆಯ ಊರಿನವನು. ಅಬೀಯನಿಗೂ ಯಾರೊಬ್ಬಾಮನಿಗೂ ಯುದ್ಧವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆ ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮೀಕಾಯ, ಇವಳು ಗಿಬೆಯದ ಉರಿಯೇಲನ ಮಗಳು. ಅಬೀಯನಿಗೂ, ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:2
11 ತಿಳಿವುಗಳ ಹೋಲಿಕೆ  

ಆಮೇಲೆ ರೆಹಬ್ಬಾಮನು ಅಬ್ಷಾಲೋಮನ ಮಗಳಾದ ಮಾಕಳನ್ನು ಮದುವೆಯಾದನು. ಆಕೆಯು ಅವನಿಂದ ಅಬೀಯ, ಅತ್ತ್ಯೆ, ಜೀಜ ಮತ್ತು ಶೆಲೋಮೀತ್ ಎಂಬ ಮಕ್ಕಳನ್ನು ಹೆತ್ತಳು.


ಅಬೀಯಾಮನು ಮೂರು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಮಾಕಾ. ಅವಳು ಅಬೀಷಾಲೋಮನ ಮಗಳು.


ಸೌಲನು ಸಹ ಗಿಬೆಯದ ತನ್ನ ಮನೆಗೆ ಹೋದನು. ಕೆಲವು ಶೂರರು ದೈವಪ್ರೇರಣೆಯಿಂದ ಸೌಲನನ್ನು ಹಿಂಬಾಲಿಸಿದರು.


ಆ ಸಾಯಂಕಾಲ ಒಬ್ಬ ವೃದ್ಧನು ಹೊಲದಿಂದ ಮನೆಗೆ ಬರುತ್ತಿದ್ದನು. ಅವನು ಎಫ್ರಾಯೀಮ್ ಬೆಟ್ಟಪ್ರದೇಶದವನಾಗಿದ್ದು, ಈಗ ಗಿಬೆಯ ನಗರದಲ್ಲಿ ವಾಸಮಾಡುತ್ತಿದ್ದನು. (ಗಿಬೆಯದ ನಿವಾಸಿಗಳು ಬೆನ್ಯಾಮೀನ್ಯರಾಗಿದ್ದರು.)


ಆ ಲೇವಿಯು ಮತ್ತು ಅವನ ಸಂಗಡ ಇದ್ದ ಜನರು ಪ್ರಯಾಣ ಮುಂದುವರಿಸಿದರು. ಅವರು ಗಿಬೆಯ ನಗರವನ್ನು ಪ್ರವೇಶ ಮಾಡಿದ ಸಮಯದಲ್ಲಿ ಸೂರ್ಯನು ಮುಳುಗುತ್ತಿದ್ದನು. ಗಿಬೆಯ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿದೆ.


ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.


ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನು ಬರೆಯಲಾಗಿದೆ.


ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀಯನ ಮೇಲೆ ಯುದ್ಧಕ್ಕೆ ತಯಾರಾದನು.


ಯಾರೊಬ್ಬಾಮನು ರಾಜನಾಗಿ ಇಪ್ಪತ್ತೆರಡು ವರ್ಷ ಆಳಿದನು. ನಂತರ ಅವನು ಸತ್ತುಹೋದನು. ಅವನನ್ನು ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನ ಮಗನಾದ ನಾದಾಬನು ಅವನ ನಂತರ ಹೊಸ ರಾಜನಾದನು.


ಪ್ರವಾದಿಯಾದ ಶೆಮಾಯ ಮತ್ತು ದರ್ಶಿಯಾದ ಇದ್ದೋ ಬರೆದ ಚರಿತ್ರೆಗಳ ವಂಶಾವಳಿಗಳಲ್ಲಿ ರೆಹಬ್ಬಾಮನು ತಾನು ರಾಜನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಬರೆಯಲ್ಪಟ್ಟಿವೆ. ಅವನ ಆಳ್ವಿಕೆಯ ಕಾಲದಲ್ಲೆಲ್ಲಾ ಅವನಿಗೂ ಯಾರೊಬ್ಬಾಮನಿಗೂ ಯುದ್ಧಗಳು ನಡೆಯುತ್ತಲೇ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು