Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:20 - ಪರಿಶುದ್ದ ಬೈಬಲ್‌

20 ಅಬೀಯನಿರುವಷ್ಟು ಕಾಲ ಯಾರೊಬ್ಬಾಮನು ಮತ್ತೆ ಬಲಗೊಳ್ಳಲೇ ಇಲ್ಲ. ಯೆಹೋವನು ಯಾರೊಬ್ಬಾಮನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ಮತ್ತೆ ತಲೆಯೆತ್ತಲೇ ಇಲ್ಲ. ಕಾಲಕ್ರಮೇಣ, ಸರ್ವೇಶ್ವರನ ದಂಡನೆಯಿಂದ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರಿಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಹೊಡೆದದರಿಂದ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲಿಲ್ಲ. ಯೆಹೋವ ದೇವರ ಶಿಕ್ಷೆಯಿಂದ ಯಾರೊಬ್ಬಾಮನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:20
9 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನು ರಾಜನಾಗಿ ಇಪ್ಪತ್ತೆರಡು ವರ್ಷ ಆಳಿದನು. ನಂತರ ಅವನು ಸತ್ತುಹೋದನು. ಅವನನ್ನು ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನ ಮಗನಾದ ನಾದಾಬನು ಅವನ ನಂತರ ಹೊಸ ರಾಜನಾದನು.


ಹತ್ತು ದಿನಗಳಾದ ಮೇಲೆ, ಯೆಹೋವನು ನಾಬಾಲನಿಗೆ ಸಾವನ್ನು ಬರಮಾಡಿದನು.


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


“ನರಪುತ್ರನೇ, ನೀನು ನಿನ್ನ ಹೆಂಡತಿಯನ್ನು ಬಹಳವಾಗಿ ಪ್ರೀತಿಸುತ್ತಿ. ಆದರೆ ನಾನು ಆಕೆಯನ್ನು ನಿನ್ನಿಂದ ತೆಗೆದು ಬಿಡುವೆನು. ನಿನ್ನ ಹೆಂಡತಿಯು ಫಕ್ಕನೆ ತೀರಿಹೋಗುವಳು. ಆದರೆ ನೀನು ನಿನ್ನ ದುಃಖವನ್ನು ಪ್ರದರ್ಶಿಸಬಾರದು. ನೀನು ಗಟ್ಟಿಯಾಗಿ ರೋಧಿಸಬಾರದು. ಅಳಬೇಡ ಅಥವಾ ಕಣ್ಣೀರು ಸುರಿಸಬೇಡ.


ಯಾರೊಬ್ಬಾಮನು ಇಸ್ರೇಲಿನ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ರಾಜನಾದನು.


ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕನಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು.


ಅಬೀಯನ ಸೈನಿಕರು ಯಾರೊಬ್ಬಾಮನ ಸೈನಿಕರನ್ನು ಓಡಿಸಿದರು. ಮತ್ತು ಅವರ ಪಟ್ಟಣಗಳಾದ ಬೇತೇಲ್, ಯೆಷಾನಾ ಮತ್ತು ಎಪ್ರೋನ್‌ಗಳನ್ನು ವಶಪಡಿಸಿಕೊಂಡರು. ಈ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿದ್ದ ಹಳ್ಳಿಗಳನ್ನೂ ವಶಪಡಿಸಿಕೊಂಡರು.


ಅಬೀಯನು ಬಲಗೊಂಡನು. ಅವನು ಹದಿನಾಲ್ಕು ಮಂದಿ ಸ್ತ್ರೀಯರನ್ನು ಮದುವೆ ಮಾಡಿಕೊಂಡು ಅವರಿಂದ ಇಪ್ಪತ್ತೆರಡು ಗಂಡುಮಕ್ಕಳನ್ನೂ ಹದಿನಾರು ಹೆಣ್ಣುಮಕ್ಕಳನ್ನೂ ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು