2 ಪೂರ್ವಕಾಲ ವೃತ್ತಾಂತ 13:3 - ಪರಿಶುದ್ದ ಬೈಬಲ್3 ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀಯನ ಮೇಲೆ ಯುದ್ಧಕ್ಕೆ ತಯಾರಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅಬೀಯನು ಯುದ್ಧಭಟರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯ್ಕೆಯಾದ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷಮಂದಿ ಆಯ್ಕೆಯಾದ ಪರಾಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿ |