2 ಪೂರ್ವಕಾಲ ವೃತ್ತಾಂತ 13:7 - ಪರಿಶುದ್ದ ಬೈಬಲ್7 ಆಗ ಕೆಲಸಕ್ಕೆ ಬಾರದ ದುಷ್ಟಜನರು ಯಾರೊಬ್ಬಾಮನ ಸ್ನೇಹಿತರಾಗಿ ಅವನನ್ನು ಹಿಂಬಾಲಿಸಿ ರೆಹಬ್ಬಾಮನಿಗೆ ವಿರುದ್ಧವಾಗಿ ದಂಗೆ ಎದ್ದರು. ಸೊಲೊಮೋನನ ಮಗನಾದ ರೆಹಬ್ಬಾಮನು ಆಗ ಸಣ್ಣ ಪ್ರಾಯದವನಾಗಿ ಅನುಭವವಿಲ್ಲದವನಾಗಿದ್ದನು. ಆದ್ದರಿಂದ ಯಾರೊಬ್ಬಾಮನನ್ನೂ ಅವನ ದುಷ್ಟ ಹಿಂಬಾಲಕರನ್ನೂ ತಡೆಯಲು ಅವನಿಗೆ ಆಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕಾಕಪೋಕರೂ ದುಷ್ಟರೂ ಆದ ಜನರನ್ನು ಕೂಡಿಕೊಂಡ ಎಳೇಪ್ರಾಯದವನೂ ಮುಗ್ಧನೂ ತಮ್ಮೆದುರಿನಲ್ಲಿ ನಿಲ್ಲಲು ಅಶಕ್ತನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡು ಆ ಸಮಯದಲ್ಲಿ ಎಳೇ ಪ್ರಾಯದವನೂ ಮೃದುಸ್ವಭಾವವುಳ್ಳವನೂ ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನಿಗೆ ಮಾರ್ಮಲೆತು ಬಲಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ನಿಷ್ಪ್ರಯೋಜಕರಾದ ದುಷ್ಟರು ಅವನ ಬಳಿಗೆ ಕೂಡಿಬಂದು, ಸೊಲೊಮೋನನ ಮಗ ರೆಹಬ್ಬಾಮನು ಎಳೆಯ ಪ್ರಾಯದವನೂ, ನಿರ್ಣಯಿಸಲಾಗದವನೂ ಅವರನ್ನು ಎದುರಿಸಲು ಬಲವಿಲ್ಲದವನೂ ಆಗಿರುವುದರಿಂದ ಅವನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡರು. ಅಧ್ಯಾಯವನ್ನು ನೋಡಿ |