2 ಪೂರ್ವಕಾಲ ವೃತ್ತಾಂತ 13:8 - ಪರಿಶುದ್ದ ಬೈಬಲ್8 “ದಾವೀದನ ಮಕ್ಕಳು ಆಳುತ್ತಿರುವ ಯೆಹೋವನ ರಾಜ್ಯವನ್ನು ಸೋಲಿಸಲು ಈಗ ನೀವು ನಿರ್ಧರಿಸಿದ್ದೀರಿ. ನಿಮ್ಮಲ್ಲಿ ಅಧಿಕ ಸಂಖ್ಯೆಯ ಸೈನ್ಯವಿರಬಹುದು. ಯಾರೊಬ್ಬಾಮನು ನಿಮ್ಮ ದೇವರುಗಳಾಗಿ ಮಾಡಿಸಿದ ಬಂಗಾರದ ಬಸವ ಮೂರ್ತಿಗಳು ನಿಮ್ಮಲ್ಲಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈಗ ನೀವು ದೊಡ್ಡ ಗುಂಪಾಗಿರುವದರಿಂದಲೂ ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಬಸವ ಮೂರ್ತಿಗಳು ನಿಮ್ಮಲ್ಲಿರುವದರಿಂದಲೂ ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರೋಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಈಗ ದಾವೀದನ ವಂಶಜರ ಕೈಯಲ್ಲಿರುವ ಯೆಹೋವ ದೇವರ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೊಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು. ಅಧ್ಯಾಯವನ್ನು ನೋಡಿ |