2 ಪೂರ್ವಕಾಲ ವೃತ್ತಾಂತ 13:9 - ಪರಿಶುದ್ದ ಬೈಬಲ್9 ನೀವು ಆರೋನನ ಸಂತತಿಯವರಾದ ಯೆಹೋವನ ಯಾಜಕರನ್ನು ಹೊರಡಿಸಿಬಿಟ್ಟರಿ. ನೀವು ಲೇವಿಯರನ್ನೂ ಹೊರಡಿಸಿಬಿಟ್ಟಿರಿ. ಅನ್ಯಜನಾಂಗದವರಂತೆ ನೀವು ನಿಮ್ಮಲ್ಲಿಂದಲೇ ಯಾಜಕರನ್ನು ಆರಿಸಿಕೊಂಡಿರಿ. ಯಾವನಾದರೂ ಏಳು ಟಗರುಗಳನ್ನೂ ಒಂದು ಎಳೇ ಹೋರಿಯನ್ನೂ ತಂದರೆ ನೀವು ಅವನನ್ನು ‘ದೇವರಲ್ಲದವುಗಳ’ ಸೇವೆಮಾಡಲು ಯಾಜಕನನ್ನಾಗಿ ಮಾಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀವು ಸರ್ವೇಶ್ವರನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗಾಗಿ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ಮಾಡಿಕೊಂಡಿರಲ್ಲಾ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ಯೆಹೋವ ದೇವರ ಯಾಜಕರಾದ ಆರೋನನ ವಂಶದವರಾದ ಲೇವಿಯರನ್ನೂ ತಳ್ಳಿ ಹಾಕಿ, ಅನ್ಯದೇಶಗಳ ಜನರಂತೆ ನಿಮಗೆ ಯಾಜಕರನ್ನು ಮಾಡಿಕೊಳ್ಳಲಿಲ್ಲವೋ? ಯಾವನಾದರೂ ದನದ ಮರಿಯಾದ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದು, ತನ್ನನ್ನು ಪ್ರತಿಷ್ಠೆ ಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನಷ್ಟೇ. ಅಧ್ಯಾಯವನ್ನು ನೋಡಿ |