2 ಪೂರ್ವಕಾಲ ವೃತ್ತಾಂತ 14:11 - ಪರಿಶುದ್ದ ಬೈಬಲ್11 ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು. ಅಧ್ಯಾಯವನ್ನು ನೋಡಿ |