2 ಪೂರ್ವಕಾಲ ವೃತ್ತಾಂತ 14:15 - ಪರಿಶುದ್ದ ಬೈಬಲ್15 ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸಮಾಡಿ ಅನೇಕಾನೇಕ ಕುರಿಗಳನ್ನೂ ಒಂಟೆಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದನ ಕಾಯುವವರ ಗುಡಾರಗಳ ಮೇಲೂ ದಾಳಿಮಾಡಿ ಸಾಕಷ್ಟು ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದನಕಾಯುವವರ ಗುಡಾರಗಳ ಮೇಲೆ ದಾಳಿಮಾಡಿ ಎಷ್ಟೋ ಒಂಟೆಕುರಿಗಳನ್ನು ಜೆರುಸಲೇಮಿಗೆ ಹೊಡೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದನಕಾಯುವವರ ಗುಡಾರಗಳ ಮೇಲೆ ಬಿದ್ದು ಎಷ್ಟೋ ಒಂಟೆ ಕುರಿಗಳನ್ನು ಯೆರೂಸಲೇವಿುಗೆ ಹೊಡೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು. ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು.
ಓಬೇದನ ಮಗನಾದ ಅಜರ್ಯನ ಮೇಲೆ ದೇವರಾತ್ಮವು ಬಂದಿತು. ಅಜರ್ಯನು ಆಸನನ್ನು ಸಂಧಿಸಿ ಹೀಗೆ ಹೇಳಿದನು: “ಆಸನೇ, ನನ್ನ ಮಾತನ್ನು ಕೇಳು. ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವನೊಡನೆ ಇದ್ದರೆ ಆತನು ನಿಮ್ಮ ಸಂಗಡ ಇರುವನು. ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಆದರೆ ನೀವು ಆತನನ್ನು ತೊರೆದರೆ ಆತನು ನಿಮ್ಮನ್ನೂ ತೊರೆಯುವನು.